ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಮತ್ತೆ ಅಧಿಕಾರಕ್ಕೆ: ಶರತ್‌ ಬಚ್ಚೇಗೌಡ

Last Updated 12 ಮಾರ್ಚ್ 2019, 14:19 IST
ಅಕ್ಷರ ಗಾತ್ರ

ವಿಜಯಪುರ: ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರವಾದ ಕಾರ್ಯಕ್ರಮಗಳ ಪರಿಣಾಮವಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಚನ್ನರಾಯಪಟ್ಟಣ ಹೋಬಳಿ ಚನ್ನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಬಿಜೆಪಿಯ ಬಿ.ಎನ್. ಬಚ್ಚೇಗೌಡ ಅವರ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.

‘ಕೇಂದ್ರದಲ್ಲಿ ಭ್ರಷ್ಟಾಚಾರ ರಹಿತವಾಗಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸಿದ್ದಾರೆ. ಸ್ವಚ್ಛ ಭಾರತ ಅಭಿಯಾನ, ಮೇಕ್ ಇನ್ ಇಂಡಿಯಾ, ಬೇಟಿ ಬಚಾವೋ ಬೇಟಿ ಪಡಾವೋ, ಜನಧನ್, ಸುಕನ್ಯಾ ಸಮೃದ್ಧಿ ಯೋಜನೆ, ಉಜ್ವಲ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭವ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳ ಮೂಲಕ ದೇಶದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳೂ ನೆಮ್ಮದಿಯಾಗಿ ಜೀವನ ಮಾಡಲಿಕ್ಕೆ ಆಗುವಂತೆ ಮಾಡಿದ್ದಾರೆ’ ಎಂದರು.

‘ಅಸಂಘಟಿತ ವಲಯದ ಕಾರ್ಮಿಕರಿಗೆ 60 ವರ್ಷದ ನಂತರ ಮಾಸಿಕ ₹ 3 ಸಾವಿರ ಪಿಂಚಣಿ ಸೌಲಭ್ಯವನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ. ವಿಶ್ವದ ಎಲ್ಲ ರಾಷ್ಟ್ರಗಳು ಭಾರತದ ಪ್ರಗತಿಯನ್ನು ಬೆರಗುಗಣ್ಣಿನಿಂದ ನೋಡುವಂತಹ ಉನ್ನತ ಮಟ್ಟಕ್ಕೆ ರಾಷ್ಟ್ರವನ್ನು ಕರೆದೊಯ್ದಿದ್ದಾರೆ. ಇದೆಲ್ಲ ಮಾನದಂಡಗಳನ್ನು ಜನರು ಗುರುತಿಸಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ. ರಾಜಣ್ಣ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ನಿಶ್ಚಿತವಾಗಿದ್ದು, ಕಾರ್ಯಕರ್ತರು ಬೂತ್‌ ಮಟ್ಟದಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT