ಶುಕ್ರವಾರ, ನವೆಂಬರ್ 22, 2019
26 °C

‘ಬಿಜೆಪಿ ಕೋಮುಗಲಭೆ ಸೃಷ್ಟಿಸುವ ಕಾರ್ಖಾನೆ’

Published:
Updated:
Prajavani

ದೇವನಹಳ್ಳಿ: ಕೇಂದ್ರ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಕೋಮುಗಲಭೆ ಸೃಷ್ಟಿಸುವ ಕಾರ್ಖಾನೆಯಾಗಿದೆ ಎಂದು ಬಹುಜನ ಸಮಾಜ ಪಕ್ಷ ರಾಜ್ಯ ಘಟಕ ಕಾರ್ಯದರ್ಶಿ ನಂದಗುಂದ ಪಿ. ವೆಂಕಟೇಶ್ ಆರೋಪಿಸಿದರು.

ಪ್ರವಾಸಿ ಮಂದಿರದಲ್ಲಿ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳ ನೇಮಕ ಮತ್ತು ಮುಂಬರುವ ವಿಧಾನಸಭೆ ಉಪಚುನಾವಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಪ್ರತಿದಿನ ಒಬ್ಬ ದಲಿತರ ಹತ್ಯೆ, ಕನಿಷ್ಠ ನಾಲ್ವರ ಮೇಲೆ ಹಲ್ಲೆ, ತಿಂಗಳಿಗೆ ಇಬ್ಬರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಇದಲ್ಲದೆ ಅತಿ ಹೆಚ್ಚು ಹಲ್ಲೆ, ದೌರ್ಜನ್ಯ, ಹತ್ಯೆ ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಎಂಬುದು ವಿಪರ್ಯಾಸವಾಗಿದೆ. ಕಳೆದ ಆರು ವರ್ಷಗಳಿಂದ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಹಿಂದುತ್ವದ ಹೆಸರಿನಲ್ಲಿ ಅಲ್ಪ ಸಂಖ್ಯಾತರು, ದಲಿತರನ್ನು ಗುರಿಯನ್ನಾಗಿಸಿಕೊಂಡಿದೆ ಎಂದು ದೂರಿದರು.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆಯ 17 ಕ್ಷೇತ್ರಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಬಿಎಸ್‌ಪಿ ವರಿಷ್ಠರು ಆದೇಶ ನೀಡಿದ್ದಾರೆ, ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲದೆ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಕಾರ್ಯಕರ್ತರು ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕು  ಎಂದರು.

ಜಿಲ್ಲಾ ಘಟಕ ಅಧ್ಯಕ್ಷ ಮುನಿಕೃಷ್ಣ, ಪ್ರಧಾನ ಕಾರ್ಯದರ್ಶಿ ಆಂಜಿನಪ್ಪ, ತಾಲ್ಲೂಕು ಘಟಕ ಅಧ್ಯಕ್ಷ ಬಂಗಾರಪ್ಪ, ಸಂಚಾಲಕ ಮುನಿರಾಜು, ನೆಲಮಂಗಲ ತಾಲ್ಲೂಕು ಘಟಕ ಅಧ್ಯಕ್ಷ ಮಾದೇಶ್‌, ಜಿಲ್ಲಾ ಘಟಕ ಕಾರ್ಯದರ್ಶಿ ಮುನಿರಾಜು, ಬೆಂಗಳೂರು ಉತ್ತರ ಉಸ್ತುವಾರಿ ಬಿ.ಎಲ್‌.ರಾಜಪ್ಪ, ಮುಖಂಡರಾದ, ಶ್ರೀನಿವಾಸ್‌, ರಾಜು, ಸೋಲೂರು ನಾಗರಾಜ್‌, ಮುನಿರಾಜು, ರಘು, ರಾಜೇಶ್‌, ಶಿವಪ್ಪ ಇದ್ದರು.

ಪ್ರತಿಕ್ರಿಯಿಸಿ (+)