ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಒತ್ತಾಯ

Last Updated 9 ಜುಲೈ 2019, 13:46 IST
ಅಕ್ಷರ ಗಾತ್ರ

ದೇವನಹಳ್ಳಿ: ‘ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಬಿ.ರಾಜಣ್ಣ ಒತ್ತಾಯಿಸಿದರು.‌

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮ್ಯಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಒಂದು ವರ್ಷದ ಹಿಂದೆ ಅಸ್ತಿತ್ವಕ್ಕೆ ಬಂದ ಮೈತ್ರಿ ಸರ್ಕಾರ ಜನರ ಆಶೋತ್ತರಗಳಿಗೆ ಒತ್ತು ನೀಡದೆ ಆಂತರಿಕ ಕಚ್ಚಾಟದಲ್ಲಿ ತೊಡಗಿದೆ. ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು ಸ್ಥಾನದ ಘನತೆ ಉಳಿಸಿಕೊಳ್ಳಲು ಮುಖ್ಯಮಂತ್ರಿ ಗೌರವಯುತವಾಗಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಕಾಂಗ್ರೆಸ್‌ನ 10, ಜೆಡಿಎಸ್‌ನ ಮೂವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ ಪಕ್ಷೇತರ ಶಾಸಕರು ತಮ್ಮ ಬೆಂಬಲ ವಾಪಸ್ ಪಡೆದಿದ್ದಾರೆ. ಸರ್ಕಾರದ ಎಲ್ಲಾ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಮಂತ್ರಿಮಂಡಲ ಇಲ್ಲದ ರಾಜ್ಯವಾಗಿದೆ. ಜನವಿರೋಧ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕಾಗಿ ಅಂಟಿಕೊಳ್ಳದೆ ಮೊದಲು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಗೌಡ, ತಾಲ್ಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಸಿ.ಮುನಿರಾಜು, ಬಿಜೆಪಿ ಮಹಿಳಾ ಮೋರ್ಚ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ವಿಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT