ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಓಲೈಕೆ ರಾಜಕಾರಣ ಮಾಡಿಲ್ಲ: ಸಚಿವ ಡಾ.ಕೆ. ಸುಧಾಕರ್‌

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಸಮರ್ಥನೆ
Last Updated 9 ನವೆಂಬರ್ 2022, 7:28 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ಹತಾಶರಾಗಿದ್ದಾರೆ’ ಎಂದು ಆರೋಗ್ಯ ಡಾ.ಕೆ. ಸುಧಾಕರ್‌ ಟೀಕಿಸಿದರು.

ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರಗತಿ ಪ್ರತಿಮೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ ಉದ್ಘಾಟನೆ, ವಿಮಾನ ನಿಲ್ದಾಣದ ಟರ್ಮಿನಲ್‌ 2, ವಂದೇ ಭಾರತ್‌ ರೈಲು ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಸ್ಥಳ ಪರಿಶೀಲಿಸಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಕೇಂದ್ರ ಬಿಜೆಪಿ ಸರ್ಕಾರ ನೀಡಿರುವ ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಇಂತಹ ಕ್ರಮ ತರಲು ಬಿಜೆಪಿಗೆ ಮಾತ್ರ ಸಾಧ್ಯವಾಗುತ್ತದೆ. ಈ ಆಲೋಚನೆಗಳು ಕಾಂಗ್ರೆಸ್‌ ಅಥವಾ ಜೆಡಿಎಸ್‌ನಿಂದ ಬರಲು ಸಾಧ್ಯವಿಲ್ಲ ಎಂದರು.

ಕೆಂಪೇಗೌಡರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದರೂ ಅವರು ಎಲ್ಲರ ನಾಯಕ. ಆದರೆ, ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್‌ನವರು ಏನೂ ಮಾಡಿಲ್ಲ. ನಾಯಕರಾದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಸೇರಿದಂತೆ ಹಿರಿಯ ಒಕ್ಕಲಿಗ ನಾಯಕರನ್ನು ಕಾಂಗ್ರೆಸ್‌ ಅಪಮಾನ ಮಾಡಿದೆ. ಅವರನ್ನು ಅಧಿಕಾರದಿಂದ ಒಂದೇ ಬಾರಿಗೆ ತೆಗೆದು ಹಾಕಿತು. ಆದರೆ, ಇದುವರೆಗೂ ಕಾರಣ ನೀಡಿಲ್ಲ ಎಂದರು.

ಸತೀಶ್‌ ಜಾರಕಿಹೊಳಿ ಅವರು ಇತಿಹಾಸದ ಬಗ್ಗೆ ಇರುವ ತಪ್ಪುಕಲ್ಪನೆ ಪ್ರದರ್ಶಿಸಿದ್ದಾರೆ. ಹಿಂದೂ ಪದ, ಹಿಂದುತ್ವ, ದೇಶದ ಇತಿಹಾಸದ ಬಗ್ಗೆ ಅವರು ಪರಿಚಯ ಮಾಡಿಕೊಂಡು ಅರಿವು ಮೂಡಿಸಿಕೊಳ್ಳುವ ಕೆಲಸ ಮಾಡಬೇಕಾಗುತ್ತದೆ. ಇಡೀ ವಿಶ್ವದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶೇಷ ಗೌರವವಿದೆ. ಸನಾತನ ಹಿಂದೂ ಧರ್ಮ ಒಂದು ಜೀವನಶೈಲಿ. ಇದು ಅತಿ ಉನ್ನತ ಆದರ್ಶವಾಗಿದೆ ಎಂದು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT