ಬುಧವಾರ, ಆಗಸ್ಟ್ 10, 2022
20 °C

ಕೋವಿಡ್‌ ನಿರ್ವಹಣೆ: ಸರ್ಕಾರದ ಕಾರ್ಯಕ್ಕೆ ಅರುಣ್ ಸಿಂಗ್ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೋವಿಡ್ ಸಂದರ್ಭದಲ್ಲೂ ಉತ್ತಮವಾಗಿ ನಿರ್ವಹಣೆ ಮಾಡಿದ್ದು, ಸೋಂಕು ನಿಯಂತ್ರಣಕ್ಕೆ ತರುವಲ್ಲಿ ಸಚಿವರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುವಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಿರತರಾಗಿದ್ದಾರೆ. ಅವರ ಅವಧಿಯಲ್ಲಿ ಏನೂ ಮಾಡಲಿಲ್ಲ. ಈಗ ಅಭಿವೃದ್ಧಿಯತ್ತ ಸಾಗುತ್ತಿರುವ ಬಿಜೆಪಿಯ ಬೆಳವಣಿಗೆ ಸಹಿಸಲಿಕ್ಕೆ ಅವರಿಂದ ಸಾಧ್ಯವಾಗುತ್ತಿಲ್ಲ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲಿಲ್ಲ. ‘ಅಲ್ಲಿಗೆ ಹೋಗಿ ಮಾತನಾಡುತ್ತೇನೆ’ ಎಂದು ಹೇಳಿದ ಅವರು, ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಿದ್ದೇನೆ. ಪ್ರತ್ಯೇಕವಾಗಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದು, ಪ್ರತಿಯೊಂದು ಇಲಾಖೆಯಲ್ಲಿ ಆಗಿರುವ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದೇನೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕುರಿತು ಚರ್ಚೆ ಮಾಡಲಿಕ್ಕೆ ಸಮಯ ನಿಗದಿಪಡಿಸಿದ್ದೇವೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು