ಮಂಗಳವಾರ, ಮೇ 17, 2022
27 °C

ಬಿಜೆಪಿ ದಲಿತ ವಿರೋಧಿ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ದಲಿತ ವಿರೋಧಿ ಎಂದು ಬಿಂಬಿಸುತ್ತಿರುವುದು ಬರೀ ಕಲ್ಪನೆ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅರೋಪಿಸಿ
ದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾದರೆ ಸಂವಿಧಾನ ಬದಲಾಯಿಸಲಿದ್ದಾರೆ. ದಲಿತರ ಮೀಸಲಾತಿ ತೆಗೆದು ಹಾಕಲಿದ್ದಾರೆ. ಸವಲತ್ತು ಕಸಿದುಕೊಳ್ಳಲಿದ್ದಾರೆ. ಬಿಜೆಪಿ ಒಂದು ಸಮುದಾಯಕ್ಕೆ ಸೀಮಿತವಾಗಿದೆ. ಅಲ್ಪಸಂಖ್ಯಾತರ ವಿರೋಧಿ ಎಂಬ ಊಹಾ
ಪೋಹ ಆರೋಪಗಳು ನಿರಂತರವಾಗಿ ಮುಂದುವರೆದಿದೆ. ನಿಜವಾಗಿಯೂ ಬಿಜೆಪಿ ದಲಿತರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಕೃಷಿ ಕಾಯ್ದೆ ವಿರೋಧಿಸಿ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಗುರಿಯನ್ನಾಗಿಸಿ ಎಂಬುವುದು ಮಾತ್ರ ಸತ್ಯ ಎಂದು ಅವರು
ಹೇಳಿದರು.

ಕೆಲವೇ ದಿನಗಳಲ್ಲಿ ರಾಜ್ಯದ ಬಜೆಟ್ ಮಂಡನೆಯಾಗಲಿದೆ. ದಲಿತರ ಸಮಸ್ಯೆ ಮತ್ತು ಅವರಿಗೆ ಸಿಗಬೇಕಾದ ಮತ್ತಷ್ಟು ಸೌಲಭ್ಯ ಕುರಿತು ರಾಜ್ಯ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.

ಬಿಜೆಪಿ ಪ‍ರಿಶಿಷ್ಟ ಮೋರ್ಚಾ ರಾಜ್ಯ ಘಟಕ ಉಪಾಧ್ಯಕ್ಷ ಕೆ.ನಾಗೇಶ್, ಜಿಲ್ಲಾ ಪರಿಶಿಷ್ಟ ಜಾತಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಾಬು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್. ಎಂ.ರವಿಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕ ಉಪಾಧ್ಯಕ್ಷೆ ಪುನಿತಾ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನಾಗವೇಣಿ, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು