ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ–ಜೆಡಿಎಸ್ ಮೈತ್ರಿ ಫಲಿಸಲ್ಲ: ಶಾಸಕ ಶರತ್ ಬಚ್ಚೇಗೌಡ

Published 2 ಮಾರ್ಚ್ 2024, 6:32 IST
Last Updated 2 ಮಾರ್ಚ್ 2024, 6:32 IST
ಅಕ್ಷರ ಗಾತ್ರ

ಹೊಸಕೋಟೆ: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರಿಗೆ ಸೋಲಾಗಿದ್ದು, ರಾಜ್ಯದಲ್ಲಿ  ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿಯೂ ಫಲಿಸುವುದಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಶಾಸಕರ ಒಗ್ಗಟ್ಟಿನ ಫಲವಾಗಿ ಮೂರು ಅಭ್ಯರ್ಥಿಗಳು ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇದು ಲೋಕಸಭೆ ಚುನಾವಣೆಗೆ ಮುನ್ನುಡಿಯಾಗಿದ್ದು, ಪಕ್ಷದ ಮೇಲಿನ ವಿಶ್ವಾಸನವನ್ನು ಕಾಂಗ್ರೆಸ್ ಶಾಸಕರು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದರು.

ನಗರಸಭೆಯ ಎಲ್ಲಾ ವಾರ್ಡ್‌ಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಮಗಾರಿಯನ್ನು ವಿಳಂಬ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಬಿ.ವಿ. ಬೈರೇಗೌಡ, ಎಚ್.ಎಂ.ಸುಬ್ಬರಾಜ್, ಡಿ.ಸಿ.ನಾಗರಾಜ್, ನಿಸಾರ್ ಅಹಮ್ಮದ್, ಹರೀಶ್ ಗೌಡ, ಮೋಹನ್ ಬಾಬು, ಕುಮಾರ್, ಸವಿತಾ ಶ್ರೀನಿವಾಸ್, ಪುಷ್ಮಮ್ಮ, ಸಾವಿತ್ರಿ, ಪವಿತ್ರ, ಗುತ್ತಿಗೆದಾರ ಈರಣ್ಣ, ತಗ್ಲಿ ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT