ದೇವನಹಳ್ಳಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಶನಿವಾರ ತಾಲ್ಲೂಕಿನ ಜಿಲ್ಲಾಡಳಿತ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಬಿಜೆಪಿ ಪಕ್ಷದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನುರೆಡ್ಡಿ, ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಹೊರತು ವೈದ್ಯರ ನಿರ್ಲಕ್ಷ್ಯ ಅಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಾವುಗಳನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಹರಿಹಾಯ್ದರು.

ವೈದ್ಯಕೀಯ ಆರೈಕೆಯನ್ನು ಗುಣಮಟ್ಟದಲ್ಲಿ ನೀಡಲು ಸೋತ್ತಿರುವ ರಾಜ್ಯ ಸರ್ಕಾರ, ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ ಮೊತ್ತವನ್ನು ಕಟ್ಟಿದೆ. ಜನ್ಮದಾತೆಯಾಗಿರುವ ಮಹಿಳೆಯರ ಸಾವನ್ನು ಹಣದಿಂದ ಅಳೆಯುತ್ತಿರುವ ರಾಜ್ಯ ಸರ್ಕಾರದ ವರ್ತನೆಗೆ ಧಿಕ್ಕಾರವಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸವಾಗುತ್ತಿಲ್ಲ. ಸರ್ಕಾರದಿಂದ ಪ್ರಜೆಗಳ ಆರೋಗ್ಯವನ್ನು ಕಾಪಾಡಲು ಆಗದ ಪರಿಸ್ಥಿತಿಗೆ ತಲುಪಸಿದ್ದಾರೆ. ಪಂಚ ಗ್ಯಾರೆಂಟಿಗಳ ಜನರ ಜೀವನಕ್ಕೆ ಮಾರಕವಾಗುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಬಿಟ್ಟಿ ಭಾಗ್ಯಗಳಿಂದ ರಾಜ್ಯದ ಜನರಿಗೆ ಸೂಕ್ತವಾದ ಸೌಲಭ್ಯಗಳು ಸಮಯಕ್ಕೆ ದೊರೆಯುತ್ತಿಲ್ಲ. ಬಡವರ ಸಾವಿಗೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಕಾಂಗ್ರೆಸ್ ಸರ್ಕಾರವೂ ತೋಲಗುವವರೆಗೂ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದರು.

ಗ್ಯಾರಂಟಿ ಹೆಸರಿನಲ್ಲಿ ದುಡ್ಡು ಹೊಡೆಯುತ್ತಿರುವ ಕಾಂಗ್ರೆಸ್ಸಿಗರ ಹಗರಣ ತಿಂಗಳಿಗೊಂದರಂತೆ ಬೆಳಕಿಗೆ ಬರುತ್ತಿದೆ. ಬಾಣಂತಿಯರ ಸಾವಿನಿಂದಾಗಿ ಅನಥರಾದ ಮಕ್ಕಳ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊತ್ತು, ಅವರನ್ನು ದತ್ತು ತೆಗೆದುಕೊಂಡು ಪೋಷಿಸಬೇಕು ಎಂದು ಒತ್ತಾಯಿಸಿದರು.

ಗುಣಮಟ್ಟದ ಆರೋಗ್ಯ ಸೌಲಭ್ಯ, ಮಹಿಳೆಯರಿಗೆ ರಕ್ಷಣೆ ನೀಡಲು ಆಗದೇ ಇದ್ದರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ತೊಲಗಲಿ ಮಹಿಳೆಯರಿಗೆ ರಕ್ಷಣೆ ಸಿಗಲಿ ಎಂದು ಘೋಷಣೆಗಳನ್ನು ಮಹಿಳಾ ಪದಾಧಿಕಾರಿಗಳು ಕೂಗಿದರು.

ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಾಗವೇಣಿ, ನೆಲಮಂಗಲ ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ,ವಿಮಲಾ ಶಿವಕುಮಾರ್, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ಎಚ್.ಎಂ. ರವಿ ಕುಮಾರ್, ಆರ್.ಕೆ.ನಂಜೇಗೌಡ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.