ಬಿಜೆಪಿ ಕಾರ್ಯಕರ್ತರಪ್ರತಿಭಟನೆ: ಲಾಠಿ ಪ್ರಹಾರ

ಶನಿವಾರ, ಜೂಲೈ 20, 2019
26 °C
ಸಂಸದ ಬಚ್ಚೇಗೌಡ ಅವರನ್ನು ಕಾರ್ಯಕ್ರಮಮಕ್ಕೆ ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘನೆ ಆರೋಪ

ಬಿಜೆಪಿ ಕಾರ್ಯಕರ್ತರಪ್ರತಿಭಟನೆ: ಲಾಠಿ ಪ್ರಹಾರ

Published:
Updated:
Prajavani

ಹೊಸಕೋಟೆ: ನಗರ ಸಾರಿಗೆ ಸಂಸ್ಥೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಸುಸಜ್ಜಿತ ನೂತನ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಸಂಸದ ಬಿ.ಎನ್‌.ಬಚ್ಚೇಗೌಡ ಅವರ ಹೆಸರನ್ನು ಕಾಟಾಚಾರಕ್ಕೆ ಮುದ್ರಿಸಲಾಗಿದೆ. ಈ ವಿಚಾರದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ ಮುರಿದು ಒಳ ನುಗ್ಗಿದ್ದ ಕಾರ್ಯಕರ್ತರು ಉದ್ಘಾಟನೆಗಾಗಿ ನಿರ್ಮಿಸಿದ್ದ ಕಮಾನು ಕಿತ್ತು ಹಾಕಿದರು. ಕಾರ್ಯಕ್ರಮಕ್ಕಾಗಿ ಹಾಕಿದ್ದ ಕುರ್ಚಿಗಳನ್ನು ಪುಡಿ ಪುಡಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯಿತು.

ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಪರಿಸ್ಥಿತಿ ಮಿತಿಮೀರಿದಾಗ ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು. ಪೊಲೀಸರ ಸಂಧಾನ ಫಲಕಾರಿಯಾಗದಿದ್ದಾಗ ಶರತ್ ಬಚ್ಚೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಪಂಚಾಯತಿ ಸದಸ್ಯರಾದ ಮಂಜು, ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಮುನಿಯಪ್ಪ ಹಾಗೂ ನೂರಾರು ಕಾರ್ಯಕರ್ತರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !