ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚರ್ಚೆ: ಎಂಟಿಬಿ ಭೇಟಿಯಾದ ವಿಜಯೇಂದ್ರ

Published 8 ಜನವರಿ 2024, 7:43 IST
Last Updated 8 ಜನವರಿ 2024, 7:43 IST
ಅಕ್ಷರ ಗಾತ್ರ

ಹೊಸಕೋಟೆ: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್  ನಿವಾಸಕ್ಕೆ ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತು ಚರ್ಚಿಸಿದರು.

‘ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಗೆಲ್ಲುವ ಗುರಿ ಹೊಂದಿದ್ದೇವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಅದಕ್ಕಾಗಿ ಚರ್ಚೆ ನಡೆಸಿದ್ದೇವೆ’ ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು. 

‘ಪಕ್ಷ ಸಂಘಟನೆಗೆ ವಿಜಯೇಂದ್ರ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಗಟ್ಟಿಗೊಳ್ಳುತ್ತಿದೆ’ ಎಂದು ನಾಗರಾಜ್ ಹೇಳಿದರು.

ಬಿಬಿಎಂಪಿ ಮಾಜಿ ಸದಸ್ಯ ನಿತೀಶ್ ಪುರುಷೋತ್ತಮ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ನಾಗರಾಜ್, ನಗರಸಭೆ ಸದಸ್ಯರಾದ ನವೀನ್, ಅರುಣ್ ಕುಮಾರ್, ಕೋಡಿಹಳ್ಳಿ ಜನಾರ್ಧನ್, ಹುಲ್ಲೂರು ಕಿರಣ್, ಹೇಮಂತ್ ಕುಮಾರ್, ತವಟಹಳ್ಳಿ ರಾಮು, ಓಬಳಾಪುರ ಮಂಜುನಾಥ್, ನಂಜೇಗೌಡ, ಅನುರೆಡ್ಡಿ, ಸೂಲಿಬೆಲೆ ರವಿ, ಸುಜಾತ ರವೀಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT