ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

7

ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

Published:
Updated:

ರಾಮನಗರ: ಉಗ್ರ ಚಟುವಟಿಕೆಗಳ ನಿಗ್ರಹಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ‌ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಿ.ಪಂ. ಭವನದ ಎದುರು ಇರುವ ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಹೆದ್ದಾರಿಯಲ್ಲಿ‌ ಮೆರವಣಿಗೆ ನಡೆಯಿತು‌. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ನಗರದಲ್ಲಿ ಈಚೆಗೆ ಉಗ್ರಗಾಮಿಯ ಬಂಧನ ಆಗಿರುವುದು ಕಳವಳಕಾರಿ ಸಂಗತಿ. ಇಂತಹ ದೇಶ ವಿರೋಧಿ ಚಟುವಟಿಕೆಗಳು ಭಾರತದ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿವೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್ ಹೇಳಿದರು.

ರಾಜ್ಯದಲ್ಲಿನ ಜೆಡಿಎಸ್ ಕಾಂಗ್ರೆಸ್ ಸರ್ಕಾರವು ಭಯೋತ್ಪಾದನಾ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿದೆ‌. ಅಲ್ಪಸಂಖ್ಯಾತರ ಮತಗಳಿಕೆಯ ಸಲುವಾಗಿ ಅವರಿಗೆ ರಕ್ಷಣೆ ನೀಡುತ್ತಿದೆ. ರಾಜ್ಯ ಗುಪ್ತಚರ ದಳ ನಿಷ್ಕ್ರಿಯವಾಗಿದೆ  ಎಂದು ದೂರಿದರು.
ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದರು. ಸ್ವ  ಕ್ಷೇತ್ರದಲ್ಲೇ ಉಗ್ರ ಬಂಧನದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !