ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ: ಸಂಸದ

Last Updated 22 ಜೂನ್ 2020, 9:39 IST
ಅಕ್ಷರ ಗಾತ್ರ

ಸೂಲಿಬೆಲೆ: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಮುಖ್ಯವಾಗಿ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಹೊಸಕೋಟೆ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದಿಂದ ಮೋತಕದಹಳ್ಳಿವರಗೆ ರಸ್ತೆ ಕಾಮಗಾರಿಗೆ ಭೂಮಿಪೂಜೆ ಕೈಗೊಳ್ಳಲಾಗಿದೆ’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ಬೇಗೂರು ಹಾಗೂ ಕಂಬಳೀಪುರ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಸುಮಾರು 16.5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಎತ್ತಿನಹೊಳೆ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆಗೆ ತ್ವರಿತವಾಗಿ ಪರಿಹಾರ ಸಿಗಲಿದೆ’ ಎಂದರು.

ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದ್ದು, ಮೊದಲ ಹಂತದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಗ್ರಾಮಕ್ಕೆ ಸೋಲಾರ್ ಬೀದಿ ದೀಪ ಅಳವಡಿಸಲಾಗುತ್ತಿದೆ. ಇದರಿಂದ ಕಡಿಮೆ ಆದಾಯವಿರುವ ಗ್ರಾಮ ಪಂಚಾಯಿತಿ ವಿದ್ಯುತ್ ಬಿಲ್ ಹೊರೆಯಿಂದ ಮುಕ್ತವಾಗುತ್ತದೆ.

‘ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಸುಮಾರು ₹ 60 ಸಾವಿರ ಕೋಟಿ ಅನುದಾನ ನೀಡಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ನರೇಗಾ ಯೋಜನೆಯಡಿ ಕೆಲಸವನ್ನು ನೀಡಿ ‘ಲಾಕ್ ಡೌನ್’ ಸಂಕಷ್ಟವನ್ನು ದೂರಮಾಡಿ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದ ಸಂಸದ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಡೆ ಗಮನ ಹರಿಸಲಾಗುತ್ತಿದೆ’ ಎಂದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ‘ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವ ಕಾರ್ಯವನ್ನು ಹಂತ ಹಂತವಾಗಿ ಮಾಡಿಕೊಂಡು ಬರಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು’ ಎಂದರು.

ಸೂಲಿಬೆಲೆ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ನಿರ್ದೇಶಕ ತಮ್ಮೇಗೌಡ, ಮುಖಂಡರಾದ ಸಿ.ಮುನಿಯಪ್ಪ, ಬಿ.ಎಂ.ನಾರಾಯಣಸ್ವಾಮಿ, ತಾ.ಪಂ.ಸದಸ್ಯ ಡಿ.ಟಿ.ವೆಂಕಟೇಶ್, ಆನಂದಪ್ಪ, ಗುತ್ತಿಗೆದಾರ ದೇವರಾಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT