ಟ್ರಾಫಿಕ್‌ಗೆ ಬೇಸತ್ತು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ವಿದ್ಯಾರ್ಥಿ ಬಂಧನ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ 12 ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಿಮಾನ ನಿಲ್ದಾಣ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಪಂಜಾಬ್ ಮೂಲದ ಗಣೇಶ್ ವೈಭವ್ (20) ಬಂಧಿತ ವಿದ್ಯಾರ್ಥಿ.
ಬೆಂಗಳೂರಿನ ಪರಪ್ಪನ ಅಗ್ರಹಾರ ಬಳಿಯ ಕೂಡ್ಲು ಗೇಟ್ ಬಳಿ ಪೋಷಕರೊಂದಿಗೆ ವಾಸವಿರುವ ಈತ, ಡಿ.10 ರಂದು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವಾಗ ಟ್ವೀಟ್ ಮಾಡಿದ್ದ.
ವಿಮಾನ ನಿಲ್ದಾಣಕ್ಕೆ ತಲುಪಲು ಸಾಕಷ್ಟು ಟ್ರಾಫಿಕ್ ಕಿರಿಕಿರಿ ಅನುಭವಿಸಿದ್ದ ಆರೋಪಿ ಬೇಸತ್ತು, ‘ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುತ್ತೇನೆ, ಬೆಂಗಳೂರಿನ ಹತ್ತಿರ ಇನ್ನೊಂದು ನಿಲ್ದಾಣ ಸ್ಥಾಪಿಸಿ’ ಎಂದು ಟ್ವೀಟ್ ಮಾಡಿದ್ದ. ಆತನ ವಿರುದ್ಧ ವಿಮಾನ ನಿಲ್ದಾಣದ ವ್ಯವಸ್ಥಾಪಕ ಡಿ.12ರಂದು ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನಗರದ ಅತಿಯಾದ ಟ್ರಾಫಿಕ್‌ನಿಂದ ಬೇಸತ್ತು ಈ ರೀತಿ ಟ್ವೀಟ್ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.