ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಜಿ ಕಚೇರಿಯಲ್ಲಿ ಧರಣಿ; ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಹೈಕೋರ್ಟ್ ತರಾಟೆ

Last Updated 18 ಜೂನ್ 2018, 8:47 IST
ಅಕ್ಷರ ಗಾತ್ರ

ನವದೆಹಲಿ: ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ (ಎಲ್‌ಜಿ) ಕಚೇರಿಯಲ್ಲಿ ಧರಣಿ ಆರಂಭಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ತರಾಟೆಗೆ ತೆಗೆದುಕೊಂಡಿದೆ.

ನೀವು ಕಳೆದ 8 ದಿನಗಳಿಂದ ಪ್ರತಿಭಟನಾನಿರತ ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ ಕೈಗೊಂಡಿದ್ದೀರಿ.ಈ ಧರಣಿಯನ್ನು ಕೈಗೊಳ್ಳಲು ನಿಮಗೆ ಅನುಮತಿ ನೀಡಿದವರು ಯಾರು ಎಂದು ಕೋರ್ಟ್ ಖಾರವಾಗಿ ಪ್ರಶ್ನಿಸಿದೆ.

ಧರಣಿಯ ಮೌಲ್ಯತೆಯನ್ನು ಪ್ರಶ್ನಿಸಿರುವ ಹೈಕೋರ್ಟ್, ನಿಮ್ಮ ಈ ನಡೆಯನ್ನು ಪ್ರತಿಭಟನೆ ಎಂದು ಪರಿಗಣಿಸಲಾಗುವುದಿಲ್ಲ. ಇನ್ನು ಮುಂದೆ ಯಾರ ಮನೆ ಹಾಗೂ ಕಚೇರಿ ಎದುರು ಪ್ರತಿಭಟನೆ ಕೈಗೊಳ್ಳುವಂತಿಲ್ಲ ಎಂದು ತಾಕೀತು ಮಾಡಿದೆ.

ಧರಣಿಯನ್ನು ನಿಲ್ಲಿಸುವಂತೆ ಕೇಜ್ರಿವಾಲ್‌ಗೆ ಸೂಚಿಸಬೇಕೆಂದು ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರು ನ್ಯಾಯಾಲಯದ ಬಳಿ ಮನವಿ ಮಾಡಿದ್ದರು.

ಕಳೆದ ಒಂದು ವಾರದಿಂದ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಸಚಿವರಾದ ಸತ್ಯೇಂದ್ರ ಜೈನ್, ಗೋಪಾಲ್ ರೈ ಧರಣಿ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT