ಶನಿವಾರ, ಏಪ್ರಿಲ್ 17, 2021
32 °C
ಜಿಲ್ಲಾ ಮಟ್ಟದ 7ನೇ ವರ್ಷದ ಗಾಳಿಪಟ ಹಾರಿಸುವ ಸ್ಪರ್ಧೆಗೆ ಚಾಲನೆ

ಜನಪದ ಆಟ ಕಣ್ಮರೆಗೆ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಮನರಂಜನೆ ನೀಡುವಂತಹ ಜಾನಪದ ಆಟಗಳು ಕಣ್ಮರೆಯಾಗುತ್ತಿರುವುದು ನೋವಿನ ಸಂಗತಿ ಎಂದು ಚನ್ನಾಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪೂರ್ಣಿಮ ನಿಂಗೇಗೌಡ ವಿಷಾದಿಸಿದರು.

ತಾಲ್ಲೂಕಿನ ಯಲಚಿಪಾಳ್ಯ ಗ್ರಾಮದ ಆಕ್ಸ್‌ಫರ್ಡ್‌ ಪಬ್ಲಿಕ್ ಶಾಲೆ ಆವರಣದಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ದೇವರ ಹೊಸಹಳ್ಳಿ ಶ್ರೀಸಂಜೀವರಾಯ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ‘ಜಿಲ್ಲಾ ಮಟ್ಟದ 7ನೇ ವರ್ಷದ ಗಾಳಿಪಟ ಹಾರಿಸುವ ಸ್ಪರ್ಧೆ’ಗೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಲ್ಲಿ ಜನಪದ ಸಂಸ್ಕೃತಿಯನ್ನು ಬಿತ್ತುವ ಮೂಲಕ ನಮ್ಮ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಕಾರ್ಯವಾಗಬೇಕು. ಇಂತಹ ಸ್ಪರ್ಧೆಗಳು ಹೆಚ್ಚು ನಡೆಯವ ಅವಶ್ಯಕತೆ ಇದೆ. ಇದರಿಂದ ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಹೆಚ್ಚುತ್ತದೆ. ಜೊತೆಗೆ ಮನಸ್ಸಿಗೆ ಮನರಂಜನೆಯೂ ಸಿಗುತ್ತದೆ ಎಂದರು.

ಟ್ರಸ್ಟ್ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿ, ‘ಜನಪದರ ಆಟೋಟಗಳಲ್ಲಿ ಗಾಳಿಪಟ ಉತ್ಸವಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಆಷಾಡಮಾಸದಲ್ಲಿ ನವವಿವಾಹಿತ ದಂಪತಿಗೆ ಗಾಳಿಪಟ ಹಾರಿಸುವ ಸ್ಪರ್ಧೆ ಏರ್ಪಡಿಸಲಾಗುತ್ತಿತ್ತು. ಈಗ ಅವು ಮರೆಯಾಗಿವೆ. ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹಾಗೂ ಮನರಂಜನೆಯನ್ನು ಏಕಕಾಲಕ್ಕೆ ನೀಡುವ ಗಾಳಿಪಟ ಕ್ರೀಡೆ ನಮ್ಮ ರಾಜ್ಯದಲ್ಲಿ ಹೆಚ್ಚು ಮನ್ನಣೆ ಗಳಿಸಿದೆ’ ಎಂದರು.

‘ಆಧುನಿಕತೆಯ ಭರಾಟೆಗೆ ಸಿಲುಕಿ ನಲುಗುತ್ತಿರುವ ಜಾನಪದ ಸೊಗಡನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ’ ಎಂದರು.

ಮುಖ್ಯಶಿಕ್ಷಕ ಆರ್.ವಿ.ವೆಂಕಟಸ್ವಾಮಿ, ಆಡಳಿತಾಧಿಕಾರಿಯಾದ ಅ.ಮಾ.ರುದ್ರಮಾದಪ್ಪ, ಶಿಕ್ಷಕಿ ನಸೀಹಾ ಭಾಗವಹಿಸಿದ್ದರು. ಹಿರಿಯ ಜನಪದ ಗಾಯಕ ಚೌ.ಪು.ಸ್ವಾಮಿ ಹಾಗೂ ದೈಹಿಕ ಶಿಕ್ಷಕ ಸಿ.ವೆಂಕಟಾಚಲ ತೀರ್ಪುಗಾರರಾಗಿ ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 64 ಮಂದಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು