ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ | ಸರ್ವೇಗೆ ಲಂಚ: ಮಧ್ಯವರ್ತಿಯಿಂದ ₹80 ಸಾವಿರ ವಶ

Published 26 ಮಾರ್ಚ್ 2024, 5:10 IST
Last Updated 26 ಮಾರ್ಚ್ 2024, 5:10 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಸೋಮವಾರ ಮಧ್ಯಾಹ್ನ ತಾಲ್ಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ಈ ವೇಳೆ ರೈತರೊಬ್ಬರಿಂದ ಹಣ ಪಡೆಯುತ್ತಿದ್ದ ಮಧ್ಯವರ್ತಿ ಸತೀಶ್‌ ಎಂಬಾತನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ₹80 ಸಾವಿರ ಹಣವನ್ನು ವಶಕ್ಕೆ ಪಡೆದಿದ್ದಾರೆ. 

ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿ ಬಳಿಯ ಜಮೀನಿನ ಪೋಡಿ ಮಾಡದೆ ಅಧಿಕಾರಿಗಳು ಮೂರು ವರ್ಷಗಳಿಂದ ರೈತರನ್ನು ಅಲೆದಾಡಿಸುತ್ತಿದ್ದರು. ಅಂತಿಮವಾಗಿ ಸರ್ವೆಯರ್ ಒಬ್ಬರು ₹3‌ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಕೊನೆಗೆ ಒಂದು ಲಕ್ಷಕ್ಕೆ ವ್ಯವಹಾರ ಕುದುರಿದ್ದು, ಮುಂಗಡವಾಗಿ ಎರಡು ದಿನದ ಹಿಂದೆ ₹20 ಸಾವಿರ ನೀಡಿದ್ದರು.

ಸೋಮವಾರ ಉಳಿದ ಹಣ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಧ್ಯವರ್ತಿಯ ವಿಚಾರಣೆ ನಡೆಸಿದ್ದಾರೆ. ದಾಳಿ ಕುರಿತು ಲೋಕಾಯುಕ್ತ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT