ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಘಾಟಿ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ನಾಗರಪಂಚಮಿ ಹಿನ್ನೆಲೆಯಲ್ಲಿ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ, ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.

ನಾಗರಪಂಚಮಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆಯಿಂದಾಗಿ ಜಿಲ್ಲಾಡಳಿತ ಶುಕ್ರವಾರ ದೇವಾಲಯ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ಬೆಳಿಗ್ಗೆಯಿಂದಲೇ ದೇವಾಲಯದ ಬಾಗಿಲು ಮುಚ್ಚಲಾಗಿತ್ತು. ಆದರೆ, ಯಡಿಯೂರಪ್ಪ ಭೇಟಿಯಿಂದಾಗಿ ದೇವಾಲಯದ ಬಾಗಿಲು ತೆರೆಯಲಾಗಿತ್ತು.

ದೇವರ ದರ್ಶನದ ನಂತರ ಯಡಿಯೂರಪ್ಪ ಅವರು ಘಾಟಿಯಲ್ಲಿ ಇರುವ ರಾಷ್ಟ್ರೋತ್ಥಾನ ಪರಿಷತ್‌ನ ಗೋ ಶಾಲೆ ಜಮೀನಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು