ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮುದಾಯ ಅಭಿವೃದ್ಧಿ ಬಿಎಸ್‌ಪಿ ಗುರಿ’

ಆನೇಕಲ್‌ ತಾಲ್ಲೂಕಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಮುಖಂಡರಿಂದ ಚಾಲನೆ
Last Updated 25 ಅಕ್ಟೋಬರ್ 2021, 5:50 IST
ಅಕ್ಷರ ಗಾತ್ರ

ಆನೇಕಲ್: ಸಮಾಜದ ಎಲ್ಲ ಸಮುದಾಯಗಳ ಅಭಿವೃದ್ಧಿ ಬಹುಜನ ಸಮಾಜ ಪಕ್ಷದ ಗುರಿಯಾಗಿದ್ದು. ಪಕ್ಷದ ತತ್ವ ಸಿದ್ದಾಂತ ಮೆಚ್ಚಿ ಹಲವು ಮಂದಿ ಬಿಎಸ್‌ಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಿಎಸ್‌ಪಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್‌.ಮುನಿಯಲ್ಲಪ್ಪ ತಿಳಿಸಿದರು.

ಅವರು ತಾಲ್ಲೂಕಿನ ಚಂದಾಪುರದಲ್ಲಿ ಬಿಎಸ್‌ಪಿ ತಾಲ್ಲೂಕು ಸಮಿತಿ ಸಭೆ ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಿಎಸ್‌ಪಿಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಲೋಪ ಜನರಿಗೆ ತಿಳಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯ ಇದೆ. ಪೆಟ್ರೋಲ್-ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನರ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಹಾಗಾಗಿ ಈ ಪಕ್ಷಗಳ ಜನವಿರೋಧಿ ನೀತಿ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದು
ಹೇಳಿದರು.

ಬಿಎಸ್‌ಪಿ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ.ವೈ.ಚಿಕ್ಕಹಾಗಡೆ ಮಾತನಾಡಿ, ತಾಲ್ಲೂಕಿನಾದ್ಯಂತ ಬಿಎಸ್‌ಪಿ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕಿನ ವಿವಿಧೆಡೆ ಅಭಿಯಾನ ಏರ್ಪಡಿಸಲಾಗುವುದು. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಇಂಡ್ಲಬೆಲೆ ಗಾಯತ್ರಿ, ನಾಗನಾಯಕನಹಳ್ಳಿ ಶಿವಕುಮಾರ್, ನಾಗಮಣಿ, ಮುರಳಿ, ನಾಗೇಶ್, ಯಲ್ಲಪ್ಪ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಬಿಎಸ್‌ಪಿ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವರಲಕ್ಷ್ಮೀರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಂಜುಳ, ಮುಖಂಡರಾದ ಡಾ.ತೋಸಿಫ್‌ ಅಹಮದ್‌, ಟಿ.ಎಸ್‌.ಕುಮಾರಾಚಾರಿ, ಸರ್ಜಾಪುರ ಲೋಕೇಶ್‌, ಮುನಿಯಲ್ಲಪ್ಪ, ಸಂಪಂಗಿ, ದೊಮ್ಮಸಂದ್ರ ಷಣ್ಮುಖ, ಮಂಜುನಾಥ್‌, ಕರ್ಪೂರು ಸೋಮಶೇಖರ, ಎನ್‌.ಪ್ರಸನ್ನ, ಮುನಿಯಲ್ಲಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT