ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರೀಯ ಭಾವೈಕ್ಯತೆ ಮೂಡಿಸಿ‘

ಜೆಸಿಐ ವಿಜಯಪುರದಿಂದ ಕಾರ್ಯಕ್ರಮ ಆಯೋಜನೆ
Last Updated 4 ಫೆಬ್ರುವರಿ 2021, 8:28 IST
ಅಕ್ಷರ ಗಾತ್ರ

ವಿಜಯಪುರ: ‘ಭಾರತ ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ. ನಮ್ಮ ರಾಷ್ಟ್ರೀಯ ಭಾವೈಕ್ಯತೆಯು ವಿಶ್ವ ಪರಿವಾರದ ಕಲ್ಪನೆಗೆ ಸಮಾನವಾಗಿದೆ’ ಎಂದು ಜೆಸಿಐ ವಿಜಯಪುರದ ಅಧ್ಯಕ್ಷ ಎನ್. ರವೀಂದ್ರ ಬಾಬು ಹೇಳಿದರು.

ಪಟ್ಟಣದ ಇನ್‌ಸ್ಫೈರ್ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಜೆಸಿಐ ವಿಜಯಪುರದಿಂದ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಅವರು ಮಾತನಾಡಿದರು.

ಸಂಪೂರ್ಣ ರಾಷ್ಟ್ರವೆಂದು ಎಂದು ತಿಳಿದಾಗ ಮಾತ್ರವೇ ಇಲ್ಲಿನ ಧರ್ಮ, ಸಂಪ್ರದಾಯ ಹಾಗೂ ಭಾಷೆಗಳ ಬಗ್ಗೆ ಗೌರವ ಭಾವನೆ ಮೂಡುತ್ತದೆ. ರಾಷ್ಟ್ರದ ಹಿತಕ್ಕಾಗಿ ವಿವಿಧತೆಯಲ್ಲಿ ಏಕತೆ ತರಲು ಪ್ರಯತ್ನಿಸುವುದು ರಾಷ್ಟ್ರೀಯ ಭಾವೈಕ್ಯತೆಯಾಗಿದೆ. ಇದನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ ಎಂದರು.

ಭಾರತ ಬಹುಭಾಷೆ, ಸಂಸ್ಕೃತಿ, ಅನೇಕ ವೇಷಭೂಷಣಗಳಿಂದ ಕೂಡಿದ ದೇಶ. ಬೇರೆ ಬೇರೆ ವರ್ಗಗಳಿಗೆ ಸೇರಿದ ಜನರು ಇಲ್ಲಿ ಒಂದಾಗಿ ಬಾಳುತ್ತಿದ್ದಾರೆ. ರಾಷ್ಟ್ರೀಯ ಭಾವೈಕ್ಯತೆಯ ಭಾವನೆಯನ್ನು ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಮೂಡಿಸುವುದು ಅವಶ್ಯಕವಾಗಿದೆ ಎಂದರು.

ಜೆಸಿಐ ಮುಖಂಡ ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಅಖಂಡ ಭಾರತವನ್ನು ಮುನ್ನಡೆಸುವ ರೂವಾರಿಗಳಾಗಿದ್ದಾರೆ. ಅವರ ಮೇಲೆ ಭಾರತದ ಭವಿಷ್ಯ ನಿಂತಿದೆ. ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಭಾವೈಕ್ಯತೆ ಕುರಿತ ಪಾಠಗಳನ್ನು ಬೋಧಿಸುವ ಶಿಕ್ಷಕರು, ಉಪನ್ಯಾಸಕರು, ದೇಶಪ್ರೇಮದ ಬಗ್ಗೆ ಕಾಳಜಿ ಹುಟ್ಟಿಸುವಂತಹ ಉದಾಹರಣೆ ನೀಡುತ್ತಾ ರಾಷ್ಟ್ರೀಯ ಮನೋಭಾವ ಬೆಳೆಸುವ ಪ್ರಯತ್ನ ಮಾಡಬೇಕು. ಅವರಿಂದಲೇ ವಿದ್ಯಾರ್ಥಿಗಳು ರಾಷ್ಟ್ರಪ್ರೇಮಿಗಳಾಗಿ ಬೆಳೆಯಲು ಸಾಧ್ಯ ಎಂದರು.

ಜೇಸಿ ಜನಾರ್ದನ ಮೂರ್ತಿ ಮಾತನಾಡಿ, ದೇಶದ ವಿವಿಧ ಭಾಗಗಳಿಗೆ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಬೇರೆ ಬೇರೆ ಸಂಸ್ಕೃತಿಗಳ ಪರಿಚಯ ಮಾಡಿಸಬೇಕು. ವಿವಿಧ ಮಾಧ್ಯಮಗಳಿಂದ ರಾಷ್ಟ್ರದ ಏಕತೆ ಕುರಿತು ಅವರಿಗೆ ತಿಳಿವಳಿಕೆ ನೀಡಬೇಕು. ಆಗ ಅವರು ರಾಷ್ಟ್ರದ ಬಗ್ಗೆ ಒಳ್ಳೆಯ ಭಾವನೆ ಹೊಂದಿ ಭವಿಷ್ಯದಲ್ಲಿ ದೇಶವನ್ನು ನಡೆಸುವ ಅತ್ಯುತ್ತಮ ಶಕ್ತಿಯಾಗಿ ಪರಿವರ್ತನೆಯಾಗುತ್ತಾರೆ. ಇದು ದೇಶದ ಸಮೃದ್ಧಿಗೆ ತಳಹದಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಶ್ರಮವೂ ಅಗತ್ಯ. ಈ ಉದ್ದೇಶದಿಂದ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಜೇಸಿ ನಾಗೇಶ್ ಮಾತನಾಡಿ, ಗ್ರಾಮೀಣ ಭಾಗದ ಯುವಕರು ವ್ಯಕ್ತಿತ್ವ ವಿಕಸನದ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದೇಶದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಯುವಜನರ ಜೀವನದಲ್ಲಿ ಬಂದಂತಹ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡಾಗ ಮಾತ್ರ ನಾವು ಬೆಳೆಯುವುದಕ್ಕೆ ಸಾಧ್ಯ ಎಂದು ತಿಳಿಸಿದರು.

ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಜೆಸಿಐ ಪ್ರಯತ್ನಿಸುತ್ತಿದೆ ಎಂದರು.

ವಿವಿಧ ಶಾಲೆಯ 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಜೆಸಿ ನಾರಾಯಣಪ್ಪ, ಶಿವಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT