ಶುಕ್ರವಾರ, ಮೇ 7, 2021
24 °C

ಪೊಲೀಸ್‌ ಭದ್ರತೆಯಲ್ಲಿ ಬಸ್‌ ಸಂಚಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರದಿಂದ ಬೆಂಗಳೂರು ಹಾಗೂ ವಿವಿಧ ಸ್ಥಳಗಳಿಗೆ ಪೊಲೀಸ್‌ ಭದ್ರತೆಯೊಂದಿಗೆ ಬಸ್‌ಗಳು ಸಂಚಾರ ಆರಂಭಿಸಿವೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದಿಂದ ದೊಡ್ಡಬಳ್ಳಾಪುರ ಡಿಪೋದಿಂದ ನಿರ್ವಹಣೆ ಮಾಡಲಾಗುತ್ತಿದ್ದ 92 ಮಾರ್ಗಗಳ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.

ಗುರುವಾರ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ನಡುವೆ ಸಾರಿಗೆ ಸಂಚಾರ ಆರಂಭಿಸಲಾಗಿದೆ. ಉಳಿದಂತೆ ದಾಬಸ್‌ಪೇಟೆ ಕಡೆಗೆ ನಾಲ್ಕು ಹಾಗೂ ದೇವನಹಳ್ಳಿ ಮಾರ್ಗದಲ್ಲಿ ನಾಲ್ಕು, ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರಕ್ಕೆ ತಲಾ ಒಂದು ಸಾರಿಗೆ ಬಸ್ ಸಂಚಾರ ಆರಂಭಿಸಿವೆ ಎಂದು ಕೆಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಆನಂದ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು