ಭಾನುವಾರ, ಏಪ್ರಿಲ್ 18, 2021
33 °C
ದೇವನಹಳ್ಳಿ ಪುರಸಭೆಯ ವಾರ್ಡ್‌ 14ರ ಉಪ ಚುನಾವಣೆ

ದೇವನಹಳ್ಳಿ: ‘ಕೈ’ ಪಾಳಯಕ್ಕೆ ಗೆಲುವಿನ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಪುರಸಭೆಯ 14ನೇ ವಾರ್ಡ್‌ಗೆ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಲಾ ಚಂದ್ರಶೇಖರ್ ಬಹುಮತದಿಂದ ಗೆಲ್ಲುವುದು ನಿಶ್ಚಿತ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ ನಾಮಪತ್ರ ಸಲ್ಲಿಸುವ ಮೊದಲು ಮಾತನಾಡಿದ ಅವರು, ಸ್ಥಳೀಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಶಶಿಕಲಾ ಅವರಿಗಿದೆ ಎಂದರು.

14ನೇ ವಾರ್ಡ್‌‌ನಲ್ಲಿ ಹಲವರು ಅಭ್ಯರ್ಥಿಯಾಗಲು ಇಚ್ಛಿಸಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಮಹಿಳಾ ಅಭ್ಯರ್ಥಿಗೆ ಈ ಬಾರಿ ಅವಕಾಶ ನೀಡಬೇಕು ಎಂದು ತೀರ್ಮಾನಿಸಿ ಕಣಕ್ಕೆ ಇಳಿಸಿದ್ದೇವೆ. ಅವರ ಕಾರ್ಯ ಚಟುವಟಿಕೆ, ಸಂಘಟನಾ ಶಕ್ತಿಯಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಶಶಿಕಲಾ ಅವರು ವಿವಿಧ ಮಹಿಳಾ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಕೆಲಸ ಮಾಡಿರುವ ಅನುಭವವಿದೆ. ಸೇವಾ ಮನೋಭಾವ, ಜನಪರ ಕಾಳಜಿ ಇಟ್ಟುಕೊಂಡಿರುವ ಅವರಿಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕ ವೆಂಕಟಸ್ವಾಮಿ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಆರ್. ರವಿಕುಮಾರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್ ಗೌಡ, ಪುರಸಭೆ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಪುರಸಭೆ ಸದಸ್ಯರಾದ ಎನ್. ರಘು, ಮುನಿಕೃಷ್ಣ, ಎಸ್.ಸಿ. ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ. ಮಂಜುನಾಥ್, ಅನಂತಕುಮಾರಿ, ಟೌನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ವೇಣುಗೋಪಾಲ್, ಸೋಮಣ್ಣ, ನಾರಾಯಣಸ್ವಾಮಿ, ಬಿ. ರಾಜಣ್ಣ, ಸತೀಶ್ ಕುಮಾರ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು