ಭಾನುವಾರ, ಜನವರಿ 26, 2020
31 °C

ಹೊಲಕ್ಕೆ ನುಗ್ಗಿದ ಕಾರು– ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಆವತಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಲಗಳಿಗೆ ನುಗ್ಗಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಹೈದರಾಬಾದ್ ಸಮೀಪದ ಉಪ್ಪಲ್‌ನ ರವೀಂದ್ರ (53) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ದರ್ಶನ ಪಡೆದು ವಾಪಸ್‌ ಬರುವ ವೇಳೆ, ಆವತಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಟಿಯುವಿ ವಾಹನದ ಅಪಘಾತವಾಗಿದೆ. ಕಾರಿನಲ್ಲಿದ್ದ ಇತರ ನಾಲ್ಕು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್‌ ಇನ್‌ಸ್ಪೆಕ್ಟರ್ ಡಿ.ಮಂಜುನಾಥ್ ತಿಳಿಸಿದ್ದಾರೆ.

ಕಾರಿನಲ್ಲಿದ್ದ ಅನಿಲ್, ಪ್ರವೀಣ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳು ದೇವನಹಳ್ಳಿಯ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)