ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರ: ಡಿ. 30ರಿಂದ ದನಗಳ ಜಾತ್ರೆ

ಸಿದ್ಧತೆ ಆರಂಭ l ಈ ಬಾರಿ ರಥೋತ್ಸವ ಇಲ್ಲ
Last Updated 23 ಡಿಸೆಂಬರ್ 2020, 2:37 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ತಾಲ್ಲೂಕಿನ ಐತಿಹಾಸಿಕ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರದಲ್ಲಿ ದನಗಳ ಜಾತ್ರೆಯನ್ನು ಡಿ. 30ರಿಂದ ನಡೆಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ ಎಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಎನ್‌. ಕೃಷ್ಣಪ್ಪ ತಿಳಿಸಿದ್ದಾರೆ.

ಅವರು ಈ ಬಗ್ಗೆ ಮಾಹಿತಿ ನೀಡಿದ ಅವರು, ತಾಲ್ಲೂಕಿನ ರೈತರು ಸೇರಿದಂತೆ ಹಲವಾರು ಜನರು ದನಗಳ ಜಾತ್ರೆ ನಡೆಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಕುರಿತು ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿದ ನಂತರ ದನಗಳ ಜಾತ್ರೆ ನಡೆಸಲು
ನಿರ್ಧರಿಸಲಾಗಿದೆ ಎಂದರು.

ದನಗಳ ಜಾತ್ರೆಗೆ ಬರುವ ರೈತರಿಗೆ ಹಾಗೂ ಜಾನುವಾರುಗಳಿಗೆ ಅಗತ್ಯ ಇರುವ ಮೂಲ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್‌ ದೀಪ, ಪಶು ವೈದ್ಯಕೀಯ ಇಲಾಖೆಯ ವೈದ್ಯರು ಜಾತ್ರೆಯಲ್ಲಿ ಇರಲಿದ್ದಾರೆ. ರಾಸುಗಳಿಗೆ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ. ರೈತರು ಜಾತ್ರೆಯಲ್ಲಿ ರಾಸುಗಳ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು.

ರಥೋತ್ಸವ ಇಲ್ಲ: ಘಾಟಿ ಕ್ಷೇತ್ರದಲ್ಲಿ ದನಗಳ ಜಾತ್ರೆ ಮಾತ್ರ ನಡೆಯಲಿದೆ. ಜ. 19ರಂದು ಬ್ರಹ್ಮರಥೋತ್ಸವವನ್ನು ದೇವಾಲಯದ ಒಳಗಡೆ ಸರಳವಾಗಿ ನಡೆಯಲಿದೆ. ಪ್ರತಿವರ್ಷದಂತೆ ದೇವಾಲಯದ ಹೊರಗೆ ರಥೋತ್ಸವ ನಡೆಯುವುದಿಲ್ಲ. ಹೆಚ್ಚಿನ ಭಕ್ತಾದಿಗಳಿಗೂ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ದನಗಳ ಜಾತ್ರೆಗೆ ಸಿದ್ಧತೆ:ಹಲವಾರು ಗೊಂದಲಗಳ ನಂತರ ದನಗಳ ಜಾತ್ರೆ ನಡೆಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದರಿಂದ ರೈತರು ಜಾತ್ರೆ ನಡೆಯುವ ಸ್ಥಳದಲ್ಲಿ ಎತ್ತುಗಳನ್ನು ಕಟ್ಟಲು ಹಾಗೂ ಬೃಹತ್‌ ಪೆಂಡಾಲ್‌ಗಳನ್ನು ಹಾಕಲು ಸೋಮವಾರ ಹಲವಾರು ರೈತರು ಜೆಸಿಬಿ ಯಂತ್ರಗಳ ಮೂಲಕ ಸಿದ್ಧತೆ ಆರಂಭಿಸಿದ್ದಾರೆ.

ಘಾಟಿ ಕ್ಷೇತ್ರದಲ್ಲಿ ನಡೆಯಲಿರುವ ದನಗಳ ಜಾತ್ರೆಗೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದ ರೈತರು ಸಹ ಕೃಷಿ ಕೆಲಸಗಳಿಗೆ ಎತ್ತುಗಳ ಖರೀದಿಗೆ ಘಾಟಿ ಕ್ಷೇತ್ರಕ್ಕೆ ಬರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT