ಹೊಸಕೋಟೆ: ನಗರದ 1, 7, 9, 17, 18, 19 ಮತ್ತು 30ನೇ ವಾರ್ಡ್ಗಳ ಅಲ್ಪಸಂಖ್ಯಾತರ ಕಾಲೊನಿಯಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಶಾಸಕ ಶರತ್ ಬಚ್ಚೇಗೌಡ ಭೂಮಿ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ರೂಪಿಸುವ ಕನಸನ್ನು ಹೊಂದಿದೆ. ಅದರಂತೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ ಹಾಕಿಕೊಂಡಿದೆ ಎಂದರು.

ನಗರದಲ್ಲಿ ಮೂಲ ಸೌಕರ್ಯ ಒದಗಿಸುವ ಸಲುವಾಗಿ ಹಲವು ಯೋಜನೆ ಹಾಕಿಕೊಂಡಿದ್ದೇವೆ. ಅದರಂತೆ ಪ್ರಸ್ತುತ ವಿವಿಧ ಕಾಲೊನಿಗಳನ್ನು ಆಯ್ಕೆ ಮಾಡಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಅದಕ್ಕಾಗಿ ಪ್ರಸ್ತುತ ನಗರದ ಏಳು ವಾರ್ಡ್ಗಳಲ್ಲಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಎಚ್.ಎಂ.ಸುಬ್ಬರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.