ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ನಗರೋತ್ತಾನ ಯೋಜನೆಯಡಿ ಸಿ.ಸಿ ರಸ್ತೆ, ಚರಂಡಿ ಕಾಮಗಾರಿ

Published 14 ಜುಲೈ 2023, 13:46 IST
Last Updated 14 ಜುಲೈ 2023, 13:46 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಇಲ್ಲಿನ ಬಶೀರ್ ಖಾನ್ ಲೇಔಟ್‌ನಲ್ಲಿ ನಗರೋತ್ತಾನ ಹಾಗೂ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಸಿ.ಸಿ.ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಚರಂಡಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಯಿತು. 

ಪುರಸಭಾ ಸದಸ್ಯ ಎ.ಆರ್.ಹನೀಪುಲ್ಲಾ ಮಾತನಾಡಿ, ‘ಈ ವಾರ್ಡಿನ ರಸ್ತೆಯು ತೀರಾ ಹದಗೆಟ್ಟಿತ್ತು. ಆದ್ದರಿಂದ ಎರಡು ಯೋಜನೆಗಳಲ್ಲಿ ಅನುದಾನಗಳನ್ನು ಮೀಸಲಿಟ್ಟುಕೊಂಡು ಕಾಮಗಾರಿ ಮಾಡಲಾಗುತ್ತಿದೆ. 340 ಮೀಟರ್ ಉದ್ದದ ರಸ್ತೆ, 640 ಮೀಟರ್ ಉದ್ದದ ಚರಂಡಿ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರತಿ ಮನೆಗಳ ಮುಂಭಾಗದಲ್ಲಿ ಒಂದೊಂದು ಸಸಿ ನೆಡಲು ಅವಕಾಶ ಮಾಡಿಕೊಡಲಾಗಿದ್ದು, ಪರಿಸರ ಸ್ವಚ್ಛತೆ ಕಾಪಾಡಲು ಅನುವು ಮಾಡಿಕೊಡಲಾಗಿದೆ. ರಸ್ತೆಯ ಎರಡೂ ಇಕ್ಕೆಲುಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸಲಾಗಿದೆ ಎಂದರು.

ಎಂಜಿನಿಯರ್ ವೆಂಕಟೇಶ್ ಮಾತನಾಡಿ, ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT