ದೊಡ್ಡನಲ್ಲೂರಹಳ್ಳಿ: ಗ್ರಾಮ ದೇವತೆ ಉತ್ಸವದ ಸಂಭ್ರಮ

ಹೊಸಕೋಟೆ: ತಾಲ್ಲೂಕಿನ ದೊಡ್ಡನಲ್ಲೂರಹಳ್ಳಿಯಲ್ಲಿ ಗ್ರಾಮ ದೇವತೆಗಳ ಉತ್ಸವ ಸಂಭ್ರಮದಿಂದ ನಡೆಯಿತು.
ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಗ್ರಾಮಸ್ಥರು ಆಚರಿಸಿದರು. ಪ್ರಮುಖ ಬೀದಿಗಳಲ್ಲಿ ಗ್ರಾಮ ದೇವತೆಗಳಾದ ಆಂಜನೇಯಸ್ವಾಮಿ, ಸೋಮೇಶ್ವರ ಸ್ವಾಮಿ, ಸಪ್ಪಲಮ್ಮ ದೇವಿ, ದೊಡ್ಡಮ್ಮದೇವಿ, ಚೌಡೇಶ್ವರಮ್ಮ ದೇವಿ, ಮರಿಯಮ್ಮ ದೇವಿ ಮೂರ್ತಿಯ ಮೆರವಣಿಗೆ ನಡೆಯಿತು. ಗ್ರಾಮ ದೇವತೆಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.