‘ಸಿಮೆಂಟ್ ರಸ್ತೆ ಕಳಪೆ ಕಾಮಗಾರಿಗೆ ಅವಕಾಶವಿಲ್ಲ’ 

7

‘ಸಿಮೆಂಟ್ ರಸ್ತೆ ಕಳಪೆ ಕಾಮಗಾರಿಗೆ ಅವಕಾಶವಿಲ್ಲ’ 

Published:
Updated:
Prajavani

ದೇವನಹಳ್ಳಿ: ಪ್ರಸ್ತುತ ನಡೆಯುವ ಸಿಮೆಂಟ್ ರಸ್ತೆ ಕಾಮಗಾರಿ ಕಳಪೆಗೆ ಅವಕಾಶವಿಲ್ಲ. ಅನುಮಾನ ಬಂದರೆ ತಕ್ಷಣ ಮಾಹಿತಿ ನೀಡಿ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಹೇಳಿದರು.

ಇಲ್ಲಿನ ಜುಟ್ಟನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ₹ 4 ಲಕ್ಷ ಅನುದಾನದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಮಗಾರಿ ನಡೆಸುವಾಗ ಸ್ಥಳೀಯರು ರಸ್ತೆ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕಾಮಗಾರಿ ಸ್ಥಳದಲ್ಲೇ ಜನಪ್ರತಿನಿಧಿಗಳು ಇರಲು ಸಾಧ್ಯವಿಲ್ಲ. ಸ್ಥಳೀಯ ಮುಖಂಡರು ಪಕ್ಷಾತೀತವಾಗಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಪ್ರಸ್ತುತ ಜಿಲ್ಲಾ ಪಂಚಾಯಿತಿ ಸದಸ್ಯರ ₹60 ಲಕ್ಷ ಅನುದಾನ ಬಿಡುಗಡೆಯಾಗಿ ಜುಟ್ಟನಹಳ್ಳಿ ಗ್ರಾಮದಿಂದ ಕಾಮಗಾರಿ ಆರಂಭಗೊಂಡಿದೆ. ಒಂದೆರಡು ದಿನದಲ್ಲಿ ಇನ್ನಷ್ಟು ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳು ಆರಂಭಿಸಲಾಗುತ್ತದೆ. ತುರ್ತು ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಮಾರ್ಚ್ ತಿಂಗಳಿಗೆ ಕಾಮಗಾರಿ ಮುಗಿಸಿ ನಂತರ ನೂತನವಾಗಿ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಹಿಂದುಳಿದ ವರ್ಗ ಜಿಲ್ಲಾ ಘಟಕ ಅಧ್ಯಕ್ಷ ಅಪ್ಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್‌ಗೌಡ, ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ಸ್ವಾಮಿ, ಮುಖಂಡರಾದ ಶ್ರೀರಾಮಯ್ಯ, ಅಂಜಿನಪ್ಪ, ಮಹೇಶ್ ಬಾಬು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !