ಕೇಂದ್ರದ ಏಕಪಕ್ಷೀಯ ನಿರ್ಧಾರ: ಟೀಕೆ

7
ಸರ್ಕಾರಕ್ಕೆ ಮಾರ್ಗಸೂಚಿಯಾಗಿ ಪ್ರತಿ ಪಕ್ಷಗಳು ಕೆಲಸ: ಸಂಸದ ಮೊಯಿಲಿ

ಕೇಂದ್ರದ ಏಕಪಕ್ಷೀಯ ನಿರ್ಧಾರ: ಟೀಕೆ

Published:
Updated:
Deccan Herald

ದೇವನಹಳ್ಳಿ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಸಂಸದ ಎಂ.ವೀರಪ್ಪ ಮೊಯಿಲಿ ಆರೋಪಿಸಿದರು.

ಇಲ್ಲಿನ ತಾಲ್ಲೂಕು ಕೃಷಿಕ ಸಮಾಜ ಭವನದ ಆವರಣದಲ್ಲಿ ಮಂಗಳವಾರ ಜಿಲ್ಲಾ ಕೃಷಿ ಸಮಾಜ ಭವನ ಕಟ್ಟಡ ನಿರ್ಮಾಣಕ್ಕೆ ನಡೆದ ಭೂಮಿ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ನಡೆಸುವ ಯಾವುದೇ ಆಡಳಿತ ಪಕ್ಷದ ಸರ್ಕಾರ ವಿರೋಧ ಪಕ್ಷಗಳನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಈಚೆಗೆ ಪ್ರಧಾನಿ ನರೆಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ  ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆಡಳಿತಕ್ಕೆ ಅವರ ಸಲಹೆ ಅವಶ್ಯ ಇಲ್ಲ ಎನ್ನುವ ದಾಟಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಆಡಳಿತ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ದೂರಿದರು.

ಹಿಂದಿನ ವಾಜಪೇಯಿ ಸರ್ಕಾರ ಹಾಗೂ ಅನೇಕ ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಪ್ರತಿ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತವನ್ನು ಸಮರ್ಪಕವಾಗಿ ನಡೆಸಿದೆ ಎಂಬುದನ್ನು ಕೇಂದ್ರ ಸರ್ಕಾರ ಮರೆತಂತಿದೆ ಎಂದರು.

ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುವ ಯಾವುದೇ ಸರ್ಕಾರ ವಿರೋಧ ಪಕ್ಷವನ್ನು ಕಡೆಗಣಿಸಬಾರದು. ಸರ್ಕಾರಕ್ಕೆ ಮಾರ್ಗಸೂಚಿಯಾಗಿ ಪ್ರತಿ ಪಕ್ಷಗಳು ಕೆಲಸ ಮಾಡುತ್ತವೆ ಎಂದರು.

ಜಿಲ್ಲಾ ಕೃಷಿಕ ಸಮಾಜ ಭವನ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ₹10 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್.ರವಿಕುಮಾರ್ ಮತ್ತು ತಾಲ್ಲೂಕು ಕೃಷಿಕ ಸಮಾಜ ಅಧ್ಯಕ್ಷ ಶ್ರೀನಿವಾಸಗೌಡ ಮಾತನಾಡಿ, ಭವನ ನಿರ್ಮಾಣಕ್ಕೆ ಅಂದಾಜು ₹75 ಲಕ್ಷ ವೆಚ್ಚದ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಮೊದಲ ಹಂತವಾಗಿ ₹50 ಲಕ್ಷ ವೆಚ್ಚದ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಕೃಷಿ ಚಟುವಟಿಕೆ ಕುರಿತು ತಜ್ಞರಿಂದ ಮಾಹಿತಿ ಪಡೆಯಲು, ವಿಚಾರ ಸಂಕಿರಣ, ಸಂವಾದ, ಉತ್ತಮ ಕೃಷಿ ಬೆಳೆಗಾರರನ್ನು ಗುರುತಿಸುವುದು ಭವನ ನಿರ್ಮಾಣದ ಉದ್ದೇಶ ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ, ಕೃಷಿಕ ಸಮಾಜ ನಿರ್ದೇಶಕರಾದ ಎಚ್.ಎಂ.ರವಿಕುಮಾರ್, ದೇವರಾಜ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಅನಂತಕುಮಾರಿ ಚಿನ್ನಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಲಕ್ಷ್ಮಿನಾರಾಯಣ, ಕೆ.ಸಿಮಂಜುನಾಥ್, ರಾಧಮ್ಮ ಮುನಿರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷಣ್‌ಗೌಡ , ಉಪಾಧ್ಯಕ್ಷೆ ನಂದಿನಿ ಇದ್ದರು.

ಎಪಿಎಂಸಿ ಅಧ್ಯಕ್ಷೆ ಅಮರಾವತಿ, ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್, ಖಾದಿ ಮಂಡಳಿ ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷ್ಮಣ್ ಮೂರ್ತಿ, ಜೆಡಿಎಸ್ ತಾಲ್ಲೂಕು ಘಟಕ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಬಮೂಲ್ ಉಪಾಧ್ಯಕ್ಷ ಶ್ರೀನಿವಾಸ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !