ದೊಡ್ಡಬಳ್ಳಾಪುರ: ತಾಲ್ಲೂಕಿನ ಐದು ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 16, 17 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, 2021 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಎನ್.ಮೋಹನ್ಕುಮಾರ್ ತಿಳಿಸಿದರು.

ಸಿಇಟಿ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರದ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ 688, ಮಾದಗೊಂಡನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 432,ಹೊಸ ಬಸ್ ನಿಲ್ದಾಣ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ 360, ವಿದ್ಯಾನಿಧಿ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜಿನಲ್ಲಿ 270, ಶ್ರೀವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದರು.

ಏಪ್ರಿಲ್ 16 ರಂದು 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ವಿಜ್ಞಾನ ಮತ್ತು ಏಪ್ರಿಲ್ 17 ರಂದು ಗುರುವಾರ ಬೆಳಿಗ್ಗೆ 10.30 ರಿಂದ 11.50ರ ವರೆಗೆ ಗಣಿತ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಜೀವವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಐದು ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿವೆ ಎಂದರು.

ಲೋಪ ಉಂಟಾಗದಂತೆ ಕ್ರಮ

ಐದು ಪರೀಕ್ಷಾ ಕೇಂದ್ರಗಳಲ್ಲೂ ವೆಬ್ ಕಾಸ್ಟಿಂಗ್ ಕಡ್ಡಾಯಗೊಳಿಸಲಾಗಿದೆ. ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಅಗತ್ಯ ಇರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಇಟಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ವರೆಗೆ ನಿಷೇಧಾಜ್ಞೆ ಜಾರಿ ಇರಲಿದೆ. ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಎನ್.ಮೋಹನ್ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.