ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಚಂದ್ರಮೌಳೇಶ್ವರ ಬ್ರಹ್ಮ ರಥೋತ್ಸವ

Last Updated 29 ನವೆಂಬರ್ 2021, 4:49 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಶ್ರೀಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಶ್ರೀಗಿರಿಜಾ ಕಲ್ಯಾಣೋತ್ಸವ ಹಾಗೂ ಲಕ್ಷ ದೀಪೋತ್ಸವ ಸಂಭ್ರಮದಿಂದ ನೆರವೇರಿತು. ಬ್ರಹ್ಮ ರಥೋತ್ಸವವು ನ. 29ರಂದು ಮಧ್ಯಾಹ್ನ 1 ಗಂಟೆಯಿಂದ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿವೆ.

ಕಡಲೆಕಾಯಿ ಪರಿಷೆ:ನಗರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಬಯಲು ಬಸವಣ್ಣ ದೇವಸ್ಥಾನದ ಸೇವಾ ಟ್ರಸ್ಟ್, ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದಿಂದ ನ. 29ರಂದು ಕನ್ನಡ ರಾಜ್ಯೋತ್ಸವ ಹಾಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಇದರ ಅಂಗವಾಗಿ ಭಾನುವಾರ ಸಂಜೆ ಗಿರಿಜಾ ಕಲ್ಯಾಣೋತ್ಸವ ನಡೆಯಿತು.

ತಾಲ್ಲೂಕಿನ ಶಿರವಾರ, ಅಂತರಹಳ್ಳಿ ಗ್ರಾಮದಲ್ಲಿನ ತೋಪಿನ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ 6ನೇ ವರ್ಷದ ಕಡಲೆ ಕಾಯಿ ಪರಿಷೆಯು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಸಂಜೆ 6ಗಂಟೆಗೆ ಬಸವೇಶ್ವರಸ್ವಾಮಿ ಮೆರವಣಿಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT