ದೊಡ್ಡಬಳ್ಳಾಪುರ: ನಗರದ ತೇರಿನ ಬೀದಿಯಲ್ಲಿ ಶ್ರೀಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.

ಮುಜರಾಯಿ ಇಲಾಖೆ ಹಾಗೂ ದೇವಾಲಯದ ಭಕ್ತ ಮಂಡಳಿಯಿಂದ ತಾಲ್ಲೂಕು ತಹಶೀಲ್ದಾರ್ ಉಸ್ತುವಾರಿಯಲ್ಲಿ ನಡೆದ ಬ್ರಹ್ಮ ರಥೋತ್ಸವದಲ್ಲಿ ವಿವಿಧೆಡೆಯಿಂದಆಗಮಿಸಿದ್ದ ಸಹಸ್ರಾರು ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.

ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸಣ್ಣ ರಥದಲ್ಲಿ ಸಾಂಕೇತಿಕವಾಗಿ ರಥೋತ್ಸವ ಆಚರಿಸಲಾಗಿತ್ತು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣೋತ್ಸವ ನಡೆಯಿತು. 5 ಅಡಿ ಕಲ್ಲಿನ ಚಕ್ರಗಳ ಮೇಲೆ, ಐದು ಅಂತಸ್ತುಗಳ ಶಿವನ ವಿವಿಧ ರೂಪ, ಅವತಾರಗಳನ್ನು ಹೊಂದಿರುವ ಚಿತ್ರಪಟಗಳು ಹಾಗೂ ತಳಿರುತೋರಣಗಳಿಂದ ಭವ್ಯ ರಥವು ಸಿಂಗಾರಗೊಂಡಿತ್ತು. ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಯಾಗ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀಕಂಠೇಶ್ವರ ಭಕ್ತ ಮಂಡಳಿ, ನಂಜುಂಡೇಶ್ವರ ಸೇವಾ ಸಮಿತಿ ಸೇರಿದಂತೆ ವಿವಿಧ ಅರವಂಟಿಗೆ ಸಮಿತಿಗಳಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅರವಂಟಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ರಥೋತ್ಸವದಲ್ಲಿ ತಹಶೀಲ್ದಾರ್ ಟಿ.ಎಸ್. ಶಿವರಾಜು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.