ಶುಕ್ರವಾರ, ಏಪ್ರಿಲ್ 23, 2021
23 °C

ಪರಿಶಿಷ್ಟ ಜಾತಿಯ ವ್ಯಕ್ತಿ ಅಂತ್ಯಕ್ರಿಯೆಗೆ ಅಡ್ಡಿ: ಶವ ಇಟ್ಟು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ತಾಲ್ಲೂಕಿನ ಹನುಮಾಪುರದದೊಡ್ಡಿಯ ಸ್ಮಶಾನದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಪಡಿಸಿದ್ದರಿಂದ ಶವವನ್ನು ಟ್ರ್ಯಾಕ್ಟರ್‌ನಲ್ಲಿಟ್ಟು ಪ್ರತಿಭಟನೆ ನಡೆಸಲಾಯಿತು.

ನಾಥಯ್ಯ (75) ಎಂಬುವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಶವವನ್ನು ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ಕೊಂಡೊಯ್ದ ಸಂದರ್ಭದಲ್ಲಿ ಗ್ರಾಮದ ರೈತರೊಬ್ಬರು ಜಾಗ ತಮಗೆ ಸೇರಿದ್ದು ಎಂದು ಶವಸಂಸ್ಕಾರಕ್ಕೆ ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡು ಜನರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ಈ ಸ್ಮಶಾನದಲ್ಲಿ ಸುಮಾರು 60 ವರ್ಷಗಳಿಂದಲೂ ಶವಸಂಸ್ಕಾರ ಮಾಡಿಕೊಂಡು ಬರಲಾಗಿದೆ. ಈ ಜಮೀನು ದಾನದ ಜಮೀನಾಗಿದೆ. ಮೂರೂವರೆ ಎಕರೆ ಸಾರ್ವಜನಿಕರ ಉಪಯೋಗಕ್ಕಾಗಿ ಬಿಟ್ಟಿದ್ದು ಅದರಲ್ಲಿ ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗಾಗಿ ಜಮೀನಿನಲ್ಲಿ ಶವಸಂಸ್ಕಾರಕ್ಕೆ ಅವರು ಅಡ್ಡಿಪಡಿಸಿದ್ದಾರೆ ಎಂದು ತಿಳಿದು
ಬಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು