ಸೋಮವಾರ, ಮಾರ್ಚ್ 1, 2021
31 °C

ತೂಕದಲ್ಲಿ ಮೋಸ: ಅಂಗಡಿ ಪರವಾನಗಿ ರದ್ದಿಗೆ ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರದ ಮಾರ್ಕೆಟ್ ರಸ್ತೆಯಲ್ಲಿನ ಜನತಾ ಬಜಾರ್ ನ್ಯಾಯಬೆಲೆ ಅಂಗಡಿಯ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಪರಿಶೀಲನೆ ವೇಳೆ ಪಡಿತರ ವಿತರಣೆಯಲ್ಲಿ 40 ಕೆ.ಜಿಗೆ ಬದಲಾಗಿ 36.2 ಕೆ.ಜಿ ಹಾಗೂ 20 ಕೆ.ಜಿ ಬದಲಿಗೆ 18 ಕೆ.ಜಿ ನೀಡುವ ಮೂಲಕ ತೂಕದಲ್ಲಿ ಮೋಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ರವೀಶ್‌ ಮಾತನಾಡಿ, ‘ಪಡಿತರ ವಿತರಣೆಯ ತೂಕದಲ್ಲಿ ವಂಚನೆ ಆಗುತ್ತಿತ್ತು. ನ್ಯಾಯಬೆಲೆ ಅಂಗಡಿಯ ಮಾಲೀಕ ನರಸಿಂಹರಾಜು ಅವರು ಪಡೆದಿದ್ದ ಪರವಾನಗಿಯನ್ನು ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗಿದೆ. ಅಲ್ಲದೆ, ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ’ ಎಂದು ಹೇಳಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು