ದಾಬಸ್ ಪೇಟೆ: ಸೋಂಪುರ ಹೋಬಳಿ ಹೊನ್ನೇನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೆಂಗಲ್ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಸಮೃದ್ಧಿ ಫಾರ್ಮ್ ಹೌಸ್ ಸಮೀಪ ಚಿರತೆ ರಾತ್ರಿ ವೇಳೆ ಓಡಾಡಿರುವುದು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಂಗಲ್ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರಾತ್ರಿ ವೇಳೆ ಮನೆಗಳ ಹತ್ತಿರ ಮೇಕೆ, ಕುರಿ ಹಾಗೂ ದನಕರುಗಳನ್ನು ಕಟ್ಟಲು ಹಾಗೂ ಒಬ್ಬರೇ ಓಡಾಡಲು ಹಿಂಜರಿಯುತ್ತಿದ್ದಾರೆ.

ಕೆಂಗಲ್ ಗ್ರಾಮದ ಬಳಿ ಬೆಟ್ಟಗುಡ್ಡ ಹಾಗೂ ಅರಣ್ಯ ಪ್ರದೇಶವಿದ್ದು, ಸ್ಥಳೀಯರು ದನ–ಕರು, ಮೇಕೆ ಕುರಿಗಳನ್ನು ಮೇಯಿಸಲು ಹೋಗುತ್ತಾರೆ. ಚಿರತೆ ಸೆರೆ ಹಿಡಿದು ದೂರದ ಕಾಡುಗಳಿಗೆ ಬಿಡಲಿ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.