ಬುಧವಾರ, ಫೆಬ್ರವರಿ 26, 2020
19 °C

ಆತಂಕ ಸೃಷ್ಟಿಸಿದ್ದ ಚಿರತೆ ಬೋನಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ನುಗ್ಗಿ ಸಾಕುಪ್ರಾಣಿಗಳನ್ನು ಎಳೆದೊಯ್ಯುತ್ತಿದ್ದ ಚಿರತೆಯು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೋಮವಾರ ಮಧ್ಯಾಹ್ನ ಬಿದ್ದಿದೆ.

ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ, ಗಲಿಬಿಲಿಕೋಟೆ, ಬೊಮ್ಮನಹಳ್ಳಿ, ಹಳೆಕೋಟೆ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ತಿಂಗಳಿಂದ ಚಿರತೆಯ ಹಾವಳಿ ಹೆಚ್ಚಾಗಿತ್ತು. ಹುಲುಕುಡಿ ಬೆಟ್ಟದ ಬಳಿ ಮೇವನ್ನು ಅರಸಿ ತೆರಳುವ ದನ, ಕುರಿ, ಮೇಕೆಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು. ಅಲ್ಲದೆ ರಾತ್ರಿ ವೇಳೆ ಗ್ರಾಮದ ಹೊರಭಾಗದ ಮನೆಗಳ ದನ, ಕುರಿ, ಮೇಕೆ, ನಾಯಿಗಳ ಮೇಲೆ ದಾಳಿ ನಡೆಸಲಾರಂಭಿಸಿತ್ತು. ಈ ಹಿನ್ನೆಲೆ ಮಾಡೇಶ್ವರ ಬಳಿ ಮುಕ್ಕಣ್ಣೇಶ್ವರ ದೇವಾಲಯದ ಬಳಿ ಬೋನ್ ಇಟ್ಟಿದ್ದು ಸುಮಾರು ಎರಡುವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಸೆರೆ ಸಿಕ್ಕಿದೆ. ಕೂಡಲೇ ಇದನ್ನು ಗಮನಿಸಿಕೊಂಡ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ಸಿದ್ದತೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು