ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಅಧಿಕಾರಿಗಳಿಂದ ಸಿಎಂ ಬೊಮ್ಮಾಯಿ ಕಾರು ತಪಾಸಣೆ

Last Updated 1 ಏಪ್ರಿಲ್ 2023, 1:10 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ಕುಟುಂಬ ಸಮೇತ ಶುಕ್ರವಾರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚೆಕ್ ಪೋಸ್ಟ್‌ನಲ್ಲಿ ತಡೆದ ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಗಡಿಯ ಹೊಸಹುಡ್ಯ ಸಮೀಪ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಖ್ಯಮಂತ್ರಿ ಕಾರು ತಡೆದು ತಪಾಸಣೆ ನಡೆಸಿದರು. ನಂತರ ಬೊಮ್ಮಾಯಿ ಘಾಟಿ ದೇವಾಲಯಕ್ಕೆ ತೆರಳಿ ಪತ್ನಿ ಸಮೇತ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜೊತೆಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT