ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆಗೆ ಚಾಲನೆ

ಮಂಗಳವಾರ, ಮಾರ್ಚ್ 26, 2019
33 °C
ಎಸ್.ಸಿ.ಪಿ, ಟಿ.ಎಸ್.ಪಿ.ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ

ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆಗೆ ಚಾಲನೆ

Published:
Updated:
Prajavani

ವಿಜಯಪುರ: ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗಾಗಿ, ರಾಜ್ಯ ಸರ್ಕಾರ ಅಗತ್ಯವಾಗಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಬೈಯಪಾ ಅಧ್ಯಕ್ಷ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂದೇನಹಳ್ಳಿ, ಹಾಗೂ ಶೆಟ್ಟಿಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆ ಹಾಗೂ ಎಸ್.ಸಿ.ಪಿ, ಟಿ.ಎಸ್.ಪಿ.ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮೈತ್ರಿ ಸರ್ಕಾರವು ಹಳ್ಳಿಗಳ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದೆ. ಈ ಸೌಲಭ್ಯಗಳನ್ನು ಜನರು ರಾಜಕೀಯ ರಹಿತವಾಗಿ ಉಪಯೋಗ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ.ಅನಂತಕುಮಾರಿ ಚಿನ್ನಪ್ಪ ಮಾತನಾಡಿ, ಸಾಕಷ್ಟು ಹಳ್ಳಿಗಳಲ್ಲಿ ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ. ಕುಡಿಯುವ ನೀರಿಗೆ ಪರದಾಟವಾಗಿದೆ. ಹಳ್ಳಿಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಆದ್ದರಿಂದ ಸರ್ಕಾರ ಸಾಕಷ್ಟು ಅನುದಾನಗಳನ್ನು ಬಿಡುಗಡೆ ಮಾಡುತ್ತಿದೆ. ಶಾಸಕರು ಹೆಚ್ಚಿನ ಅನುದಾನಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಂಡು ಬಂದು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಜನರು ಈ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಕುಂದಾಣ ಹೋಬಳಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಮಾತನಾಡಿ, ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸರ್ಕಾರ, ಕುಡಿಯುವ ನೀರು, ರಸ್ತೆಗಳ ನಿರ್ಮಾಣ, ಚರಂಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೇಂದ್ರದಲ್ಲಿ ಯು.ಪಿ.ಎ. ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದಿರುವ ನರೇಗಾ ಯೋಜನೆಯ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪಂಚಾಯಿತಿಗಳ ಮೂಲಕ ಅನುಷ್ಠಾನಕ್ಕೆ ತರಲಾಗಿದೆ ಎಂದು ವಿವರಿಸಿದರು.

ಈಗಲೂ ಯೋಜನೆ ಅನುಷ್ಠಾನದಲ್ಲಿದ್ದು, ಅಭಿವೃದ್ಧಿಗೆ ಪೂರಕವಾಗಿದೆ. ರೈತರು ತಮ್ಮ ತೋಟಗಳಲ್ಲೂ ಅಭಿವೃದ್ಧಿ ಕೆಲಸ ಮಾಡಿಕೊಳ್ಳಲಿಕ್ಕೆ ಅವಕಾಶವಿದ್ದು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣಗೌಡ, ಸದಸ್ಯರಾದ ಚೈತ್ರಾವೀರೇಗೌಡ, ಶಶಿಕಲಾಆನಂದ್, ದಿನ್ನೂರು ವೆಂಕಟೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್, ಜಗದೀಶ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾಜು, ಮುಖಂಡರಾದ ರವೀಂದ್ರ, ಎಂ.ಮುನಿಯಪ್ಪ, ಕೋರಮಂಗಲ ವೀರಪ್ಪ, ಕಲ್ಯಾಣ್ ಕುಮಾರ್ ಬಾಬು, ಮಂಡಿಬೆಲೆ ರಾಜಣ್ಣ, ಗೋವಿಂದರಾಜು, ಭರತ್, ಪುರ ಕೃಷ್ಣಪ್ಪ, ಲಕ್ಷ್ಮಣಗೌಡ, ರಂಗನಾಥಪುರ ನಟರಾಜ್, ಮಹೇಶ್, ಬಿಜ್ಜವಾರ ಆನಂದ್, ರವಿಕುಮಾರ್, ಎ.ಪಿ.ಎಂ.ಸಿ.ನಿರ್ದೇಶಕ ಸುಧಾಕರ್ ಬಿದಲೂರು ಶಂಕರ್, ಹರ್ಷವರ್ಧನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !