ದೇವನಹಳ್ಳಿ: ಡೆಂಗಿ ಜ್ವರ ತಡೆಗೆ ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಂಡರೆ ಡೆಂಗಿ ಹರಡುವ ಸಾಧ್ಯತೆಯನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಜಿಲ್ಲಾ ಮಲೇರಿಯಾ ಕಚೇರಿಯ ಜಿಲ್ಲಾ ಕೀಟಶಾಸ್ತ್ರ ತಜ್ಞೆ ಲತಾ ತಿಳಿಸಿದರು.

ತಾಲ್ಲೂಕಿನ ಚಿಕ್ಕಸಣ್ಣೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಡೆಂಗಿ ನಿಯಂತ್ರಣ ದಿನಾಚರಣೆಯಲ್ಲಿ ಮಾತನಾಡಿದರು.

ಡೆಂಗಿ ಹರಡುವ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಮನೆಗಳಲ್ಲಿ ನೀರು ಸಂಗ್ರಹಿಸುವ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ, ಮಣ್ಣಿನ ಮಡಕೆ, ಟಯರ್ ಹಾಗೂ ಬಕೆಟ್ಗಳಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳ ಉತ್ಪತ್ತಿಯಾಗುತ್ತವೆ ಎಂದು ಎಚ್ಚರಿಸಿದರು.

ಇದ್ದಕ್ಕಿದ್ದಂತೆ ತೀವ್ರ ಜ್ವರ, ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ದೇಹದ ಮಾಂಸಖಂಡ ಮತ್ತು ಕೀಲುಗಳಲ್ಲಿ ತೀವ್ರ ನೋವು ಕಾಣಿಸಿಕೊಳ್ಳುವುದು ಡೆಂಗಿಯ ಸಾಮಾನ್ಯ ಲಕ್ಷಣ. ರೋಗ ತೀವ್ರವಾದರೆ ಬಾಯಿ, ಮೂಗು ಹಾಗೂ ವಸಡುಗಳಿಂದ ರಕ್ತಸ್ರಾವವಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದರು.

ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಅಗತ್ಯ. ನೀರು ಸಂಗ್ರಹಿಸುವ ಪಾತ್ರೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮರುಬಳಕೆ ಮಾಡಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದರೆ ಅವುಗಳನ್ನು ಮುಚ್ಚಳದಿಂದ ಬಿಗಿಯಾಗಿ ಮುಚ್ಚಿಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಮುತಾಹಿರ್ ಆಫೀಜ್ ತಿಳಿಸಿದರು.

ಮನೆಯೊಳಗೆ ಸೊಳ್ಳೆ ಪ್ರವೇಶಿಸದಂತೆ ಕಿಟಕಿಗಳಿಗೆ ಜಾಲರಿ ಅಳವಡಿಸಬೇಕು. ಸಂಜೆ ವೇಳೆಯಲ್ಲಿ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸುವುದು ಉತ್ತಮ. ಸೊಳ್ಳೆ ಕಡಿತದಿಂದ ಪಾರಾಗಲು ಸೊಳ್ಳೆ ಬತ್ತಿ ಹಾಗೂ ಬೇವಿನ ಸೊಪ್ಪಿನ ಹೊಗೆಯನ್ನು ಬಳಸಬಹುದು ಎಂದು ತಿಳಿಸಿದರು.

ಮನೆಯ ಸುತ್ತಮುತ್ತ ಎಳೆನೀರು ಚಿಪ್ಪುಗಳು, ಹಳೆಯ ಟಯರ್ಗಳು, ಒಡೆದ ಬಾಟಲಿಗಳು ಮತ್ತು ಇತರೆ ತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿದರೆ ಡೆಂಗಿ ನಿಯಂತ್ರಣ ಸಾಧ್ಯ ಎಂದು ಹೇಳಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಿ.ಎನ್. ರೇಖಾ, ಆರೋಗ್ಯ ನಿರೀಕ್ಷಕ ಅಧಿಕಾರಿ ವೆಂಕಟೇಶ್ ಮತ್ತು ಪ್ರಸನ್ನ, ತಾಲ್ಲೂಕು ಎಪಿಡೆಮಿಯಾಲಜಿಸ್ಟ್ ಮುರುಳಿ, ಸಮುದಾಯ ಆರೋಗ್ಯ ಅಧಿಕಾರಿ ಅಜಯ್, ಸುಮಾ ಹೊಸಮನಿ, ಆಶಾ ಕಾರ್ಯಕರ್ತೆ ವೀಣಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-15-2093071504

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.