ಮಕ್ಕಳ ದುರ್ಬಳಕೆ ವಿರುದ್ಧ ಜಾಗೃತಿ ಅಗತ್ಯ

7
ವಿಜಯಪುರ ಪ್ರೌಢಶಾಲೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಮಕ್ಕಳ ದುರ್ಬಳಕೆ ವಿರುದ್ಧ ಜಾಗೃತಿ ಅಗತ್ಯ

Published:
Updated:
ಮಾನವ ಕಳ್ಳ ಸಾಗಣೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅಬ್ದುಲ್‌ ಕರೀಮ್‌ ಮಾತನಾಡಿದರು

ವಿಜಯಪುರ: ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುವುದು ಕಾನೂನು ಪ್ರಕಾರ ಅಪರಾಧ. ಈ ಬಗ್ಗೆ ಕಾನೂನು ಜಾಗೃತಿ ಅಗತ್ಯ ಎಂದು ದೇವನಹಳ್ಳಿ ಹಿರಿಯ ಸಿವಿಲ್ ನ್ಯಾಯಾಧೀಶ ದಿನೇಶ್ ಹೆಗಡೆ ಹೇಳಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ‘ಮಾನವ ಕಳ್ಳ ಸಾಗಾಣಿಕೆ ಕುರಿತು ಕಾನೂನು ಅರಿವು ಕಾರ್ಯಕ್ರಮ’ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪ್ರೌಢಾವಸ್ಥೆಯಲ್ಲಿನ ಮಕ್ಕಳು ತಿಳಿಯದೆ ಅಪರಾಧ ಜಾಲಕ್ಕೆ ಸಿಲುಕಿ ಬಿಡುತ್ತಾರೆ. ಮಕ್ಕಳಿಗೆ ಈ ಬಗ್ಗೆ ಸೂಕ್ತ ಅರಿವು ಮೂಡಿಸಬೇಕು. ಸಾಮಾಜಿಕ ಚೌಕಟ್ಟು, ಕಾನೂನು ಮಿತಿಯಲ್ಲಿ ಅಂಥವುಗಳನ್ನು ತಡೆಗಟ್ಟಬೇಕು. ಮಾನವ ಕಳ್ಳಸಾಗಣೆ ತಡೆಯುವ ನಿಟ್ಟಿನಲ್ಲಿ ಪೋಷಕರು, ಸಮಾಜದ ಸಹಕಾರ ಅಗತ್ಯವಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅಶ್ವತ್ಥಮ್ಮ ಮಾತನಾಡಿ, ಪ್ರೌಢಾವಸ್ಥೆಯಲ್ಲಿರುವ ಮಕ್ಕಳು ಆಮಿಷಗಳಿಗೆ ಬಲಿಯಾದರೆ ಭವಿಷ್ಯ ಭೀಕರವಾಗುತ್ತದೆ. ಪೋಷಕರು, ಶಿಕ್ಷಕರು ಮಕ್ಕಳ ಮೇಲೆ ದೊಡ್ಡ ನಿರೀಕ್ಷೆ ಇರಿಸಿಕೊಂಡಿದ್ದಾರೆ. ನಿರೀಕ್ಷೆ ಹುಸಿಗೊಳಿಸುವ ಕೆಲಸವನ್ನು ಮಕ್ಕಳು ಮಾಡಬಾರದು ಎಂದರು.

‘ಮಾನವ ಕಳ್ಳ ಸಾಗಣೆ ಪ್ರಕರಣಗಳು ಪತ್ತೆಯಾದಾಗ ತಕ್ಷಣದ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ತುರ್ತು ಅಗತ್ಯವಿದೆ. ಸಮೀಕ್ಷೆ ಕೈಗೊಂಡು ಕಳ್ಳ ಸಾಗಾಣಿಕೆಯ ಕಾರಣಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾಗಿದೆ’ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಡಿ.ಮಂಜುಳಾ ಮಾತನಾಡಿ, ಮಾನವ ಕಳ್ಳ ಸಾಗಣೆ ತಡೆಗಟ್ಟಲು ಸಾಕಷ್ಟು ಕಾನೂನುಗಳು ಇವೆ. ಲಭ್ಯವಿರುವ ಕಾನೂನುಗಳ ಕುರಿತು ಜನಜಾಗೃತಿ ಮೂಡಿಸಬೇಕಾಗಿರುವ ಅಗತ್ಯವಿದೆ. ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ಸಮಾಜಕ್ಕೆ ಅಂಟಿದ ದೊಡ್ಡ ಕಳಂಕವಾಗಿದೆ ಎಂದರು.

ಮಹಿಳೆಯರನ್ನು, ಮಕ್ಕಳನ್ನು ಗೌರವಿಸುವ ಸಮಾಜ ಪ್ರಗತಿ ಹೊಂದಬೇಕಾದರೆ ಸರ್ಕಾರ, ಸ್ವಯಂಸೇವಾ ಸಂಸ್ಥೆಗಳು ಪ್ರಯತ್ನಿಸಿದರೆ ಸಾಲದು. ಅವರೊಂದಿಗೆ ಗ್ರಾಮ ಮಟ್ಟದಲ್ಲಿರುವ ಚುನಾಯಿತ ಜನಪ್ರತಿನಿಧಿಗಳ ಸಹಭಾಗಿತ್ವವೂ ಅವಶ್ಯವಾಗಿದೆ ಎಂದರು.  ದೇಶಕ್ಕೆ ಉತ್ತಮ ಇತಿಹಾಸವಿದ್ದು, ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸಿ, ಪೂಜ್ಯಭಾವದಿಂದ ನೋಡಿಕೊಳ್ಳುವ ಅವಶ್ಯವಿದೆ ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಬ್ಬುಲ್ ಸಲೀಂ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಭೈರೇಗೌಡ, ಉಪಾಧ್ಯಕ್ಷ ಎ.ಗೋವಿಂದರಾಜು, ಕಾರ್ಯದರ್ಶಿ ಡಿ.ಎಸ್.ಪ್ರಭಾಕರ್, ಖಜಾಂಚಿ ಎಂ .ಶ್ರೀನಿವಾಸ್, ತಾಲ್ಲೂಕು ಕಾರ್ಮಿಕ ನಿರೀಕ್ಷಕ ಚೇತನ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಎ.ಹೆಚ್. ನಾಗರಾಜ್, ಕಂದಾಯ ಅಧಿಕಾರಿ ಜಯಕಿರಣ್, ಉಪ ತಹಶೀಲ್ದಾರ್ ಅನಂದ್, ಹಿರಿಯ ಶಿಕ್ಷಕ ಪಿ.ಎಂ. ಕೊಟ್ರೇಶ್, ವಕೀಲರಾದ ಮೋಹನ್, ಸುಮಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ದೇವರಾಜಪ್ಪ, ಚಲಪತಿ ಇದ್ದರು.

ತಾಲ್ಲೂಕು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ದೇವನಹಳ್ಳಿ ಹಾಗೂ ಪುರಸಭೆ ವಿಜಯಪುರ ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !