ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: ಬಾಲ ಕಾರ್ಮಿಕನ್ನು ರಕ್ಷಿಸಿದ ಅಧಿಕಾರಿಗಳು

Published 24 ಜೂನ್ 2024, 15:49 IST
Last Updated 24 ಜೂನ್ 2024, 15:49 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರ ಬಾಲ ಹಾಗೂ ಕಿಶೋರ ಕಾರ್ಮಿಕರ  ತಪಾಸಣೆ ಹಾಗೂ ದಾಳಿಯಲ್ಲಿ ಒಬ್ಬ ಬಾಲ ಕಾರ್ಮಿಕ ಹಾಗೂ ಒಬ್ಬ ಕಿಶೋರ ಕಾರ್ಮಿಕನನ್ನುಅಧಿಕಾರಿಗಳು ರಕ್ಷಿಸಿದ್ದಾರೆ.

ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿ, ಗ್ಯಾರೇಜು, ಬೇಕರಿ, ಚಿಕನ್ ಮತ್ತು ಮಟನ್ ಅಂಗಡಿ, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಅರಿವು ಮೂಡಿಸಲಾಯಿತು.

14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದ್ದಲ್ಲಿ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ₹20 ಸಾವಿರಗಿಂತ ಕಡಿಮೆ ಇಲ್ಲದಂತೆ ಮತ್ತು ₹50 ಸಾವಿರವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಕಾರ್ಮಿಕ ಅಧಿಕಾರಿ ಎಚ್.ಆರ್.ನಾಗೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಎಸ್.ಸುಬ್ಬಾರಾವ್, ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಮ್ಮ, ಶಿಕ್ಷಣ ಇಲಾಖೆ ಬಿ.ಆರ್.ಸಿ ನಾಗರಾಜು, ಸ್ವಯಂ ಸೇವಕ ಸಣ್ಣಕರಿಯಪ್ಪ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಹಾಗೂ ಸೌಮ್ಯ ಹಾಜರಿದ್ದರು.

ತಾಲ್ಲೂಕಿನ ಇಟ್ಟಿಗೆ ಕಾರ್ಖಾನೆಯೊಂದಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು.
ತಾಲ್ಲೂಕಿನ ಇಟ್ಟಿಗೆ ಕಾರ್ಖಾನೆಯೊಂದಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT