ದೊಡ್ಡಬಳ್ಳಾಪುರ: ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾತಾವರಣ ರೂಪಿಸಬೇಕಿದೆ. ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದರು.

ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಚನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಕಡೆಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲ್ಲೂಕಿನ ಕೊಡಿಗೇಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ಪರಿಶೀಲಿಸಿದ ವೇಳೆ ವಸತಿ ನಿಲಯಗಳಲ್ಲಿ ಉತ್ತಮ ಸೌಲಭ್ಯವಿದ್ದರೂ ಕೂಡ ಮಕ್ಕಳ ರಕ್ಷಣಾ ನೀತಿ ಅನುಷ್ಠಾನವಾಗದಿರುವುದು ಗಮನಕ್ಕೆ ಬಂದಿದೆ. ಆದಷ್ಟು ಬೇಗ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನ ಮಾಡಲು ಸೂಚನೆ ನೀಡಿದರು. ಮಕ್ಕಳ ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ ನೀಡಿದರು.

ಅಂಗನವಾಡಿ ಸ್ಥಳಾಂತರಿಸಿ: ದೊಡ್ಡಬಳ್ಳಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಸ್ವಯಂ ಸೇವಾ ಸಂಸ್ಥೆಯಿಂದ ತೆರೆಯಲಾಗಿರುವ ಅಂಗನವಾಡಿ ಕೇಂದ್ರವನ್ನು ಶೀಘ್ರವಾಗಿ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು. ಜತೆಗೆ ಜಿಲ್ಲೆಯಲ್ಲಿನ ಅಪೌಷ್ಟಿಕ, ತೀವ್ರ ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಬೇಕು ಎಂದರು. ಮಕ್ಕಳ ಚಿಕಿತ್ಸಾ ವಿವರಗಳನ್ನು ಪರಿಶೀಲಿಸಿದರು.

ತಾಲ್ಲೂಕಿನ ಚನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ 50 ವರ್ಷಕ್ಕೂ ಹೆಚ್ಚಿನ ಸಮಯದಿಂದ ಗುಡಿಸಲಿನಲ್ಲಿ ಮೂಲಸೌಕರ್ಯ ಇಲ್ಲದೇ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಮಕ್ಕಳ ಗ್ರಾಮ ಸಭೆ ಸಮಯದಲ್ಲಿ ಇಲ್ಲಿನ ಮಕ್ಕಳು ಆಧಾರ್, ಪಡಿತರ ಚೀಟಿ ಸೇರಿದಂತೆ ವಿವಿಧ ಸಮಸ್ಯೆಗಳು ಇರುವ ಬಗ್ಗೆ ಗ್ರಾಮ ಪಂಚಾಯಿತಿಗೆ ಮನವಿ ಮಾಡಿರುವ ಕುರಿತು ಯುವಸಂಚಲನ ಟ್ರಸ್ಟ್ ಮಕ್ಕಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗಮನಿಸಿದ ಆಯೋಗದ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜನರ ಸಮಸ್ಯೆಗಳನ್ನು ಆಲಿಸಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಿ ಶೀಘ್ರವಾಗಿ ಗ್ರಾಮಸಭೆ ನಡೆಸಿ ಅಲ್ಲಿನ ಜನರ ಸಮಸ್ಯೆ, ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು. ಆಧಾರ್, ಯುಡಿಐಡಿ ಕಾರ್ಡ್ ಇಲ್ಲದ ಮಕ್ಕಳ ಮಾಹಿತಿ ಪಡೆದು ಅವರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಇಇಒ ಮಂಜುನಾಥ ಅರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಾರದಾ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್, ಚಿದಾನಂದಮೂರ್ತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.