ಆನೇಕಲ್: ತಾಲ್ಲೂಕಿನ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮ ಸಭೆ ಶನಿವಾರ ನಡೆಯಲಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಗೆ ತಿಳಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಮಾಡಬೇಕು. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಅಲೆದಾಡುವುದು ತಪ್ಪುತ್ತದೆ. ಹರಪನಹಳ್ಳಿಯಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಗಬ್ಬುನಾಥದ ರಸ್ತೆಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ವಾರಕ್ಕೆ ಎರಡು ಬಾರಿ ಮಾತ್ರ ಕಸದ ಗಾಡಿಗಳು ಬರುತ್ತಿರುವುದರಿಂದ ಕಸ ನಿರ್ವಹಣೆ ಕಷ್ಟವಾಗಿದೆ. ಬುಕ್ಕಸಾಗರ ಸೇರಿದಂತೆ ವಿವಿಧಡೆಯಿಂದ ಕಸವನ್ನು ತಂದು ಹರಪನಹಳ್ಳಿಯಲ್ಲಿ ಸುರಿಯಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಸಮಸ್ಯೆಗಳ ಪಟ್ಟಿ ನೀಡಿದರು.

ಗ್ರಾಮ ಪಂಚಾಯತಿಯ ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಿಳಿಸಿರುವಂತೆ ಬೇರೆ ಗ್ರಾಮಗಳಿಂದ ಬಂದು ಮತ್ತೊಂದು ಗ್ರಾಮದಲ್ಲಿ ಕಸ ಸುರಿಯುತ್ತಿರುವುದು ತಪ್ಪು. ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವರಿಗೆ ದಂಡ ವಿಧಿಸಲು ಕ್ರಮ ವಹಿಸಲಾಗುವುದು. ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ತಿಳಿಸಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿನಾರಾಯಣ್ ತಿಳಿಸಿದರು.

ಕಲ್ಲುಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಇಂದ್ರಮ್ಮ, ಉಪಾಧ್ಯಕ್ಷ ಹರೀಶ್ ರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.