ಗುರುವಾರ , ಏಪ್ರಿಲ್ 2, 2020
19 °C

ಭಾವೈಕ್ಯ ಮಕ್ಕಳ ಮೇಳಕ್ಕೆ ಸಜ್ಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತ ಸೇವಾದಳ ಕೇಂದ್ರ ಸಮಿತಿ ವತಿಯಿಂದ ಜ.28 ರಿಂದ 30ರ ವರೆಗೆ ನಡೆಯಲಿರುವ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳಕ್ಕೆ ವೇದಿಕೆ ಸಿದ್ಧಗೊಂಡಿದೆ.

ಸಂಜೆ 4.30ಕ್ಕೆ ನಡೆಯಲಿರುವ ಉದ್ಘಾಟನ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಸಚಿವರು, ಗಣ್ಯರು ಬರಲಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಡಿವೈಎಸ್‌ಪಿ ಟಿ.ರಂಗಪ್ಪ ತಿಳಿಸಿದ್ದಾರೆ. ಇದಕ್ಕಾಗಿ 200 ಜನ ಪೊಲೀಸ್‌ ಸಿಬ್ಬಂದಿ, ಅಗ್ನಶಾಮಕ ದಳ, ಜಿಲ್ಲಾ ಪೊಲೀಸ್‌ ಮೀಸಲುಪಡೆಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕ್ರೀಡಾಂಗಣದಲ್ಲಿ ಐದು ಸಾವಿರ ಜನ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರು ಬರಲು ಅವಕಾಶ ಇದೆ. ಭಗತ್‌ಸಿಂಗ್‌ ಕ್ರೀಡಾಂಗಣದ ಸುತ್ತಲಿನ ಪ್ರದೇಶದಲ್ಲಿ ಎಲ್ಲ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಸೇವಾದಳ ಕಾರ್ಯಕ್ರಮಕ್ಕೆ ರಾಜ್ಯದ ಹೊರಗಿನ ಜಿಲ್ಲೆಗಳಿಂದ ಮಕ್ಕಳನ್ನು ಕರೆತಂದಿರುವ ವಾಹನಗಳಿಗೆ ಪ್ರತ್ಯೇಕವಾಗಿ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಗೃಹ ಸಚಿವ ಬಸವರಾಜ್ ಎಸ್.ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ ಭಾಗವಹಿಸಲಿದ್ದಾರೆ. ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷೆತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಕೆ.ಶ್ರೀನಿವಾಸ್, ಶರತ್ ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ,ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌ ಭಾಗವಹಿಸಲಿದ್ದಾರೆ.

ಮಕ್ಕಳ ಮೇಳೆಕ್ಕೆ ರಾಜ್ಯದ ಪ್ರತಿ ಜಿಲ್ಲೆಯಿಂದ 150 ಮಕ್ಕಳು ಸೇರಿದಂತೆ 4500 ಮಕ್ಕಳು ಹಾಗೂ ಒಂದು ಸಾವಿರ ತರಬೇತಿದಾರರು ಭಾಗವಹಿಸಲಿದ್ದಾರೆ. ಮಕ್ಕಳಿಗೆ ಕುಡಿಯುವ ನೀರು, ಊಟದ ವ್ಯವಸ್ಥೆಯೊಂದಿಗೆ, ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚುವರಿ ಸಂಚಾರಿ ಆಸ್ಪತ್ರೆ, ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)