ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ | ಜೂಜು ಅಡ್ಡೆ ಮೇಲೆ ದಾಳಿ: ಐವರ ಬಂಧನ

Published 1 ಮೇ 2024, 15:34 IST
Last Updated 1 ಮೇ 2024, 15:34 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಸಂತೇಕಲ್ಲಹಳ್ಳಿ ಗ್ರಾಮದ ಸಂತೆ ಮೈದಾನದಲ್ಲಿ ಜೂಜಾಟದಲ್ಲಿ ನಿರತವಾಗಿದ್ದ ಗುಂಪಿನ ಮೇಲೆ ಗ್ರಾಮಾಂತರ ಠಾಣೆ ಇನ್ಸ್ ಸ್ಪೆಕ್ಟರ್ ಶಿವರಾಜು ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ಐವರನ್ನು ಬಂಧಿಸಿದ್ದಾರೆ.

ಸಂತೇಕಲ್ಲಹಳ್ಳಿ ಗ್ರಾಮದ ಬಾಬಾಜಾನ್, ವೆಂಕಟೇಶ್, ನಾರಾಯಣಸ್ವಾಮಿ, ರವಿ ಹಾಗೂ ವಡ್ಡಹಳ್ಳಿಯ ಸಂತೋಷ್ ಬಂಧಿತರು. ಬಂಧಿತರಿಂದ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ₹7,030 ಹಣ ವಶಪಡಿಸಿಕೊಂಡಿದ್ದಾರೆ.

ಎ.ಎಸ್.ಐ ಪ್ರಕಾಶ್, ನಾಗರಾಜ, ಆನಂದಕುಮಾರ್, ಅಶೋಕ, ಕೃಷ್ಣಮೂರ್ತಿ, ಮಂಜೇಶ್, ವಿನಾಯಕ, ಜೀಪ್ ಚಾಲಕ ಶ್ರೀನಿವಾಸ್ ದಾಳಿಯ ತಂಡದಲ್ಲಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT