ಗುರುವಾರ , ಜನವರಿ 27, 2022
20 °C

ಸೂಲಿಬೆಲೆ: ರಾಜಕಾಲುವೆ ದುರಸ್ತಿಗೆ ನಾಗರಿಕರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಲಿಬೆಲೆ: ಪಟ್ಟಣದ ಒಂದನೇ ವಾರ್ಡ್‌ನಲ್ಲಿ ಹಾದು ಹೋಗುವ ರಾಜಕಾಲುವೆಯಲ್ಲಿ ನೀರು ನಿಂತು ದುರ್ನಾತ ಬೀರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾಲುವೆಯಲ್ಲಿ ನೀರು ನಿಲ್ಲದಂತೆ ದುರಸ್ತಿಗೊಳಿಸಲು ಮುಂದಾಗಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಕಾಲುವೆಯಲ್ಲಿ ನೀರು ನಿಲ್ಲುತ್ತಿದೆ. ಜೊತೆಗೆ ಕಸ, ಕಡ್ಡಿ ಇನ್ನಿತರ ತ್ಯಾಜ್ಯ ನೀರಿನಲ್ಲಿ ಸೇರಿರುವುದರಿಂದ ಕಾಲುವೆಯ ಅಕ್ಕಪಕ್ಕದ ನಿವಾಸಿಗಳಿಗೆ ದುರ್ನಾತ ಬೀರುತ್ತಿದೆ. ರಾಜಕಾಲುವೆ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಮನೆ ಬಾಗಿಲು ಸದಾ ಮುಚ್ಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚೆಗೆ ಸೂಲಿಬೆಲೆ ಗ್ರಾಮ ಪಂಚಾಯಿತಿಯ ಒಂದನೇ ವಾರ್ಡ್‌ನಲ್ಲಿ ಗ್ರಾಮ ನೈರ್ಮಲ್ಯ ಮತ್ತು ಚರಂಡಿ ಸ್ವಚ್ಛತೆ ಕಾಮಗಾರಿಗೆ ₹ 40 ಸಾವಿರ ಖರ್ಚು ಮಾಡಲಾಗಿದೆ. ಆದರೆ, ಸರಿಯಾದ ರೀತಿಯಲ್ಲಿ ಚರಂಡಿ ಸ್ವಚ್ಛತೆ ಮಾಡದ ಕಾರಣದಿಂದ ರಾಜಕಾಲುವೆಯಲ್ಲಿ ಹಳ್ಳ ನಿರ್ಮಾಣವಾಗಿದೆ. ಇದರ ಪರಿಣಾಮ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯದೆ ಹಳ್ಳದಲ್ಲಿ ನಿಲ್ಲುತ್ತಿದೆ .

‘ರಾಜಕಾಲುವೆಯಲ್ಲಿ ನೀರು ಹರಿಯ ದಿರುವ ಬಗ್ಗೆ ಗಮನಕ್ಕೆ ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಲಾಗುವುದು’ ಎಂದು ಪಿಡಿಒ ಸುಂದರ್ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.