ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ‌ಮಾರಾಮಾರಿ ಇಬ್ಬರಿಗೆ ಗಾಯ

Published 28 ಏಪ್ರಿಲ್ 2024, 5:59 IST
Last Updated 28 ಏಪ್ರಿಲ್ 2024, 5:59 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ನಂದಗುಡಿ ಹೋಬಳಿಯ ಶಿವನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಿಯಪ್ಪನಹಳ್ಳಿಯಲ್ಲಿ ಶುಕ್ರವಾರ ಮತದಾನ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಎರಡೂ ಪಕ್ಷಗಳ ಒಬ್ಬೊಬ್ಬರು ಗಾಯಗೊಂಡಿದ್ದಾರೆ.

ಮತದಾನ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಗಲಾಟೆಯಲ್ಲಿ ಎರಡು ಪಕ್ಷದ ಒಬ್ಬೊಬ್ಬ ಕಾರ್ಯಕರ್ಯರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ವಿಚಾರಿಸಿದ ಎಂಟಿಬಿ: ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಹೆಚ್ಚಾಗುತ್ತಿವೆ. ಅನ್ಯಾಯ ಪ್ರಶ್ನಿಸಿದರೆ ಹಲ್ಲೆ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಎಂಟಿಬಿ ನಾಗರಾಜ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT