ಶುಕ್ರವಾರ, ಮೇ 20, 2022
23 °C

‘ಅನಧಿಕೃತ ಅಂಗಡಿ ತೆರವುಗೊಳಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪಟ್ಟಣದ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಂಡಿದ್ದು, ಬೆಸ್ಕಾಂ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದೆ. ಇವುಗಳ ತೆರವಿಗೆ ಪುರಸಭೆ ಆಡಳಿತ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ)ಯ ಕಾರ್ಯಕರ್ತರು ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಕರವೇ ಜಿಲ್ಲಾ ಮುಖಂಡ ಅಣ್ಣಮ್ಮತಾಯಿ ಸುರೇಶ್ ಮಾತನಾಡಿ, ಈ ಬಗ್ಗೆ ಬೆಸ್ಕಾಂ ಇಲಾಖೆ ಪ್ರಶ್ನಿಸಿದರೆ ಅವರು ಪುರಸಭೆ ಅಧಿಕಾರಿಗಳ ಮೇಲೆ ಹೇಳುತ್ತಿದ್ದಾರೆ. ಪುರಸಭೆಯವರು ಲೋಕೋಪಯೋಗಿ ಇಲಾಖೆಯ ಮೇಲೆ ಹೇಳುತ್ತಿದ್ದಾರೆ. ಈ ಗೊಂದಲದ ವಾತಾವರಣದಿಂದಾಗಿ ಸಮಸ್ಯೆ ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು
ಒತ್ತಾಯಿಸಿದರು.

ಸಮರಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಚತ್ರಪತಿ, ನರಸಿಂಹಣ್ಣ, ಮಂಜುನಾಥ್ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು