ವಿಜಯಪುರ: ‘ಇಲ್ಲಿನ ಸಂತೆ ಮೈದಾನದ ಬಳಿಯಿರುವ ಕ್ಲಿನಿಕ್ನ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕ್ಲಿನಿಕ್ನ್ನು ಸೀಲ್ ಡೌನ್ ಮಾಡಲಾಗಿದೆ. ಒಂದು ವಾರದಿಂದ ಈ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದುಕೊಂಡಿರುವವರು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸೋಂಕಿತ ವೈದ್ಯರಿಗೆ ಮೂರು ದಿನಗಳಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ತಪಾಸಣೆ ಮಾಡಿಸಿಕೊಂಡಿದ್ದರು. ಗುರುವಾರ ಅವರ ಪರೀಕ್ಷಾ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಕ್ಲಿನಿಕ್ ಹಾಗೂ ಅವರು ವಾಸಿಸುತ್ತಿದ್ದ ವಿನಾಯಕ ನಗರದ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಸುತ್ತಮುತ್ತಲಿನಲ್ಲಿ ಸ್ಯಾನಿಟೈಸಿಂಗ್ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ, ಸೋಂಕಿತರ ಪ್ರಥಮ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವಕಾರ್ಯವನ್ನು ಮಾಡುತ್ತಿದ್ದಾರೆ.

ಜನರಲ್ಲಿ ಆತಂಕ: ಕ್ಲಿನಿಕ್ನಲ್ಲಿ ಒಂದು ವಾರದಿಂದ ಚಿಕಿತ್ಸೆ ಪಡೆದುಕೊಂಡಿರುವ ರೋಗಿಗಳಲ್ಲಿ ಆತಂಕ ಶುರುವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.