ದೇವನಹಳ್ಳಿ: ಭಾರತ ಬುದ್ಧನ ನಾಡು. ಹಾಗಂತ ರಾಷ್ಟ್ರದ ಏಕತೆ, ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ.

ಇಲ್ಲಿಯ ಬೈರದೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸರ್ಕಾರದ ಎರಡನೇ ವರ್ಷದ ಸಾಧನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದ ಶಾಂತಿ, ಸಾಮರಸ್ಯ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಯಾರೇ ಆದರೂ ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಭಯೋತ್ಪಾದನೆ ಮತ್ತು ಉಗ್ರರನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನಿರ್ನಾಮ ಮಾಡುತ್ತೇವೆ ಎಂದು ಶಪಥ ಮಾಡಿದರು.

'ಪಾಕಿಸ್ತಾನದ ಮೇಲೆ ಯುದ್ಧ ಬೇಡ ಎಂದು ನಾನು ಹೇಳಿಲ್ಲ; ಅನಿವಾರ್ಯವಾದಲ್ಲಿ ಮಾತ್ರ ಯುದ್ದ ಎಂದು ಮೈಸೂರಿನಲ್ಲಿ ಹೇಳಿದ್ದೆ. ಆದರೆ, ನನ್ನ ಹೇಳಿಕೆಯನ್ನು ವಿರೋಧ ಪಕ್ಷದವರು ತಿರುಚಿದ್ದಾರೆ' ಎಂದರು.

'ಭಯೋತ್ಪಾದನೆಯಂತಹ ವಿಧ್ವಂಸಕ ಕೃತ್ಯವನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ನಾನು ಅದನ್ನು ಖಂಡಿಸುತ್ತೇನೆ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
.ಸಿದ್ದರಾಮಯ್ಯ ಪಾಕ್ ಏಜೆಂಟ್: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ.ಪಾಕಿಸ್ತಾನದ ಮೇಲೆ ಯುದ್ಧ ಅಗತ್ಯವಿಲ್ಲ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.