₹ 50 ಕೋಟಿ ಅನುದಾನಕ್ಕೆ ಮುಖ್ಯಮಂತ್ರಿ ಒಪ್ಪಿಗೆ 

7

₹ 50 ಕೋಟಿ ಅನುದಾನಕ್ಕೆ ಮುಖ್ಯಮಂತ್ರಿ ಒಪ್ಪಿಗೆ 

Published:
Updated:
Deccan Herald

ದೇವನಹಳ್ಳಿ: ಕ್ಷೇತ್ರದ ಅಭಿವೃದ್ಧಿಗೆ ಮೊದಲ ಹಂತವಾಗಿ ₹50 ಕೋಟಿ ಅನುದಾನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಅಣ್ಣಿಘಟ್ಟ ಗ್ರಾಮದಲ್ಲಿ ಗುರುವಾರ ಸುಗ್ಗಲಮ್ಮದೇವಿ ದೇವಾಲಯ ನಿರ್ಮಾಣ ಹಂತ ಪರಿಶೀಲಿಸಿ ಮಾತನಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿರುವ ಈ ಹಿಂದಿನ ಒಟ್ಟು ₹80 ಕೋಟಿ ಅನುದಾನದ ಪೈಕಿ ₹30 ಕೋಟಿ ತೂಬುಗೆರೆ ಹೋಬಳಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ದುರಸ್ತಿ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ತಾಲ್ಲೂಕಿನಲ್ಲಿ 237 ಮುಜರಾಯಿ ದೇವಾಲಯಗಳಿವೆ. ಶಿಥಿಲಗೊಂಡಿರುವ ದೇವಾಲಯಗಳ ಪಟ್ಟಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಅರ್ಹರಿಗೆ ನಿವೇಶನಗಳಿಲ್ಲ. ಗ್ರಾಮ ಸಭೆಗಳು ಸಕ್ರಿಯವಾಗಿ ಅರ್ಹರನ್ನು ಆಯ್ಕೆ ಮಾಡುವಲ್ಲಿ ಎಡವುತ್ತಿವೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು.

ಪ್ರತಿ ಬುಧವಾರ ತಾಲ್ಲೂಕು ಪಂಚಾಯಿತಿ ಶಾಸಕರ ಕೊಠಡಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಮಸ್ಯೆಗೆ ಪರಿಹಾರ ಸೂಚಿಸಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ₹1ಲಕ್ಷ ಮತ್ತು ಎಪಿಎಂಸಿ ನಿರ್ದೇಶಕ ಕೆ.ವಿ.ಮಂಜುನಾಥ್ ₹50 ಸಾವಿರ ದೇಣಿಗೆ ನೀಡಿದರು.

ಗ್ರಾಮ ಪಂಚಾಯಿತಿ ಉಪಧ್ಯಕ್ಷೆ ಭಾರತಿ ರಮೇಶ್, ಸದಸ್ಯ ಮುನೀಂದ್ರ ,ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಮಹೇಶ್, ಮುಖಂಡರಾದ ಸುಬ್ರಮಣಿ, ಲಗುಮಯ್ಯ, ಟಿ.ನಾರಾಯಣಸ್ವಾಮಿ, ರಾಮಕೃಷ್ಣಪ್ಪ, ಚಂದ್ರಪ್ಪ, ಡೈರಿ ಕೃಷ್ಣಪ್ಪ, ನಾಗರಾಜು, ಮುನಿರಾಮಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !